Breaking News

ಜೀವ ಬೆದರಿಕೆ ಕುರಿತು ಪ್ರತಿಕ್ರಿಯಿಸಿದ ಪೊಲೀಸ್‌ ಆಯುಕ್ತ ಎನ್.ಶಶಿಕುಮಾರ್

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನೊಂದವರ ಸಭೆ ಮಾಡಲಾಗಿದೆ. ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿನ ಕೊಲೆ, ಅತ್ಯಾಚಾರ, ಪೋಕ್ಸ್‌ ಇತ್ಯಾದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಹಾಗೂ ಕುಟುಂಬಸ್ಥರ ಆಪ್ತ ಸಮಾಲೋಚನೆಗಾಗಿ ನೊಂದವರ ಸಭೆ ನಡೆಸಿದ್ದು, ಇದರಲ್ಲಿ ಕೋರ್ಟ್ ಆವರಣದಲ್ಲಿಯೇ ಚಂದ್ರಶೇಖರ ಗುರೂಜಿ ಕೊಲೆಯ ಆರೋಪಿಗಳು ಜೀವ ಬೆದರಿಕೆ ಹಾಕಿರುವ ಬಗ್ಗೆ ಮಾಹಿತಿ ಬಂದಿದೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ ಎಂದರು.

ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ
ದಾಖಲೆಗಳನ್ನು ಕೋರ್ಟ್ ಹಾಜರು ಪಡಿಸುವ ಜೊತೆಗೆ
ಇಬ್ಬರು ಕೊಲೆ ಆರೋಪಿಗಳು ಮಾತ್ರವೇ ಈ ಜೀವ
ಬೆದರಿಕೆ ಹಾಕಿದ್ದಾರೋ ಅಥವಾ ಬೇರೆ ಯಾರಾದರೂ ಎಂಬುದನ್ನು ತನಿಖೆ ಮಾಡಲಾಗುವುದು ಎಂದರು.

Share News

About Shaikh BigTv

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *