ಜೈಪುರ: ಭಾರತ ಮತ್ತು ಅಮೆರಿಕ ಸೇನೆಗಳ ನಡುವಿನ 20ನೇ ಆವೃತ್ತಿಯ ಸೇನಾ ಜಂಟಿ ಸಮರಾಭ್ಯಾಸ ಯುದ್ಧ್ ಅಭ್ಯಾಸ 2024 ರಾಜಸ್ಥಾನದ ಪಶ್ಚಿಮ ವಲಯದಲ್ಲಿರುವ ಮಹಾನ್ ಫೀಲ್ಡ್ ಫೈರಿಂಗ್ ರೇಂಜಸ್ನಲ್ಲಿ ಸೋಮವಾರ ಪ್ರಾರಂಭವಾಗಿದೆ.
ಭಾರತ ಮತ್ತು ಅಮೆರಿಕದ ಒಟ್ಟು 1,200 ಸೈನಿಕರು ಈ ಅಭ್ಯಾಸದಲ್ಲಿ ಭಾಗವಹಿಸುತ್ತಿದ್ದಾರೆ. ಸೋಮವಾರ ಬೆಳಗ್ಗೆ 10:30ರ ಸುಮಾರಿಗೆ ಪಥಸಂಚಲನದೊಂದಿಗೆ ಸೇನಾ ಸಮರಾಭ್ಯಾಸ ಆರಂಭಗೊಂಡಿತು. ಈ ಆವೃತ್ತಿಯು ಸೈನ್ಯದ ಶಕ್ತಿಯನ್ನು ಸೂಚಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
600 ಸಿಬ್ಬಂದಿಯನ್ನು ಒಳಗೊಂಡಿರುವ ಭಾರತೀಯ ಸೇನಾ ತುಕಡಿಯನ್ನು ರಜಪೂತ್ ರೆಜಿಮೆಂಟ್‍ನ ಬೆಟಾಲಿಯನ್ ಮತ್ತು ಇತರ ಶಸ್ತ್ರಾಸ್ತ್ರ ಪಡೆಗಳ ಸಿಬ್ಬಂದಿ ಭಾಗವಹಿಸಲಿದ್ದಾರೆ.
ಈ ಸಮಾರಭ್ಯಾಸ ಎರಡೂ ರಾಷ್ಟ್ರಗಳ ಸೇನೆಗಳ ನಡುವೆ ರಕ್ಷಣಾ ಸಹಕಾರ ಹೆಚ್ಚಸಲಿದೆ. ಉಭಯ ದೇಶಗಳ ನಡುವಿನ ಯುದ್ಧತಾಂತ್ರಿಕ ಸಹಭಾಗಿತ್ವ ವೃದ್ಧಿಗೆ ಸಹಕಾರಿಯಾಗಲಿದೆ. ಯುದ್ಧದ ಹೊಸ ತಂತ್ರಗಳನ್ನು ಅರಿಯಲು ನೆರವಾಗುತ್ತದೆ ಎಂಬುದನ್ನು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಅಮಿತಾಭ್ ಶರ್ಮಾ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





