Breaking News

ಬೆಂಗಳೂರು ಉಪ ನಗರ ರೈಲು ಯೋಜನೆ: ಮೊದಲ ಹಂತದ ಕಾಮಗಾರಿ 2026 ಕ್ಕೆ ಪೂರ್ಣ

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಗಳ ಮೊದಲ ಹಂತದ ಕಾಮಗಾರಿ 2026 ಡಿಸೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಮಾಹಿತಿ ನೀಡಿದರು.
ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಕೇಂದ್ರ ಸಚಿವರು, ಚಿಕ್ಕಬಾಣಾವರ- ಬೈಯ್ಯಪ್ಪನಹಳ್ಳಿ (25 ಕಿ.ಮೀ- ಕಾರಿಡಾರ್‌-2 ) ಮತ್ತು ಹೀಲಲಗಿ- ರಾಜಾನುಕುಂಟೆ (46.88 ಕಿ.ಮೀ- ಕಾರಿಡಾರ್‌-4 ) ಉಪನಗರ ರೈಲ್ವೆ ಯೋಜನೆಗಳನ್ನು 2026ರ ಡಿಸೆಂಬರ್‌ ವೇಳೆಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು.
ಉಪನಗರ ರೈಲು ಯೋಜನೆಯ ಒಟ್ಟು ನಾಲ್ಕು ಕಾರಿಡಾರ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಶಂಕುಸ್ಥಾಪನೆ ನೆರವೇರಿಸಿದ್ದರು. ನಿಗದಿತ ಅವಧಿಯ ಒಳಗೆ 2 ಮತ್ತು 4ನೇ ಕಾರಿಡಾರ್‌ ಯೋಜನೆಗಳನ್ನು ಉದ್ಘಾಟಿಸಲಾಗುವುದು. ಬಳಿಕ ಇತರ ಎರಡು ಕಾರಿಡಾರ್‌ಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *