Breaking News

ನಾಗಾವಿ ಐತಿಹಾಸಿಕ ಸ್ಥಳ ಅಭಿವೃದ್ದಿಪಡಿಸಲು ಕಾರ್ಯ ಯೋಜನೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ನಾಗಾವಿ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲು ಕಾರ್ಯಯೋಜನೆ ರೂಪಿಸಲಾಗಿದ್ದು, ಅದರಂತೆ ಸ್ಮಾರಕಗಳನ್ನು ಉಳಿಸಿಕೊಂಡು ಸುಂದರ ಪ್ರವಾಸಿ ತಾಣವಾಗಿ ರೂಪಿಸಲು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.
ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕಾರ್ಯಯೋಜನೆ ಪರಿಶೀಲಿಸಿದ ಅವರು, ನಾಗಾವಿಯಲ್ಲಿ 10-13 ಶತಮಾನಗಳ ನಡುವೆ ಘಟಿಕಾಸ್ಥಾನವಿದ್ದು 400ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪಾಠ-ಪ್ರವಚನಗಳಲ್ಲಿ ನಿರತರಾಗಿದ್ದರು, ಅವರಿಗೆ ಉಳಿದುಕೊಳ್ಳಲು ವಸತಿ ನಿಲಯಗಳ ವ್ಯವಸ್ಥೆಯಿದ್ದು, ಅತ್ಯುತ್ತಮ ಗ್ರಂಥಾಲಯವನ್ನೂ ಹೊಂದಿತ್ತು ಎಂಬ ಐತಿಹ್ಯಗಳಿವೆ ಎಂದು ಹೇಳಿದರು. ಇಂತಹ ಇತಿಹಾಸವನ್ನು ಹೊಂದಿರುವ ಈ ಸ್ಥಳವನ್ನು ಉಳಿಸಿಕೊಂಡು, ಸ್ಮಾರಕಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿರುವುದರಿಂದ ನಾಗಾವಿ ದೇಗುಲಗಳು, ಶಾಸನ ಹಾಗೂ ಸ್ಮಾರಕಗಳನ್ನು ಒಳಗೊಂಡ ಸಂಕೀರ್ಣವನ್ನು ರೂಪಿಸಲಾಗುವುದು. ಪ್ರವಾಸಿಗರಿಗೆ ವಾಹನ ತಂಗುದಾಣ, ವಿಶ್ರಾಂತಿ ಕೊಠಡಿ, ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುವುದು ಎಂದು ಅವರು ತಿಳಿಸಿದರು.
ಯಲ್ಲಮ್ಮ ದೇಗುಲ, ನಂದೀಶ್ವರ ದೇಗುಲ, ರಾಮೇಶ್ವರ ಹಾಗೂ ರಾವಣೇಶ್ವರ ದೇಗುಲಗಳು, ಕಡ್ಲೆ ಬಸವಣ್ಣ, ಹನುಮಾನ್ ಹಾಗೂ ವೀರಪ್ಪಯ್ಯ ದೇಗುಲಗಳು, ಮಧುಸೂಧನಾಲಯ, ಮಲ್ಲಯ್ಯನ ಹಾಗೂ ಈಶ್ವರನ ದೇಗುಲಗಳು, ಎರಡು ಮಸೀದಿಗಳು, ಒಂದು ಜೈನ ಬಸದಿಯನ್ನು ಒಳಗೊಂಡಂತೆ ನಾಗಾವಿ ಸಂಕೀರ್ಣವನ್ನು ರೂಪಿಸಲಾಗುವುದೆಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದರು.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್, ಪುರಾತತ್ವ ಇಲಾಖೆಯ ನಿರ್ದೇಶಕಿ ಸ್ಮಿತಾ ರೆಡ್ಡಿ ಹಾಜರಿದ್ದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *