Breaking News

ಟೋಲ್‌ ಡಿವೈಡರ್ ಗೆ ಕಾರು ಡಿಕ್ಕಿ : ಮಗು ಸಾವು

ಹುಬ್ಬಳ್ಳಿ : ಟೋಲ್‌ ಡಿವೈಡರ್ ಗೆ ಕಾರು ಡಿಕ್ಕಿ ಮಗು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನೆಲವಡಿ ಟೋಲ್ ಬಳಿ ಘಟನೆ ನಡೆದಿದೆ.

ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಟೋಲ್ ಹತ್ತಿರ ವೇಗವಾಗಿ ಬಂದು ನಿಯಂತ್ರಣ ಕಳೆದುಕೊಂಡ ಕಾರು, ಟೋಲ್ ನ ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೂರು ತಿಂಗಳ ಮಗು ಸಾವನ್ನಪ್ಪಿದೆ.

ಹುಬ್ಬಳ್ಳಿಯಿಂದ ಮುಂಡರಗಿ ಗೆ ಹೊರಟಿದ್ದ ಕಾರು. ವಿರೇಶ ಸಜ್ಜನ ಶೆಟ್ಟರ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂರು ತಿಂಗಳ ಮಗು ಸಾನ್ವಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು,ಅಣ್ಣಿಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *