Breaking News

ಸಿಎಂ ಅವರು ಹಗರಣ ಪ್ರಕರಣಗಳ ಸಮನ್ವಯ ಸಮಿತಿ ರಚಿಸಿದ್ದಾರೆ: ಸಚಿವ ಸಂತೋಷ ಲಾಡ್

ಧಾರವಾಡ: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿವೆ ಎನ್ನಲಾದ ಹಗರಣಗಳ ಕುರಿತು ತನಿಖೆ ನಡೆಸುವಂತೆ ಸಿಎಂ ಅವರು ಹಗರಣ ಪ್ರಕರಣಗಳ ಸಮನ್ವಯ ಸಮಿತಿ ರಚಿಸಿದ್ದು, ಅದರಲ್ಲಿ ನನ್ನನ್ನೂ ಸದಸ್ಯನನ್ನಾಗಿ ಮಾಡಿದ್ದಾರೆ. ಎರಡು ತಿಂಗಳಲ್ಲಿ ಹಗರಣಗಳ ತನಿಖೆ ನಡೆಸಿ ವರದಿ ನೀಡುವಂತೆ ಸಿಎಂ ತಾಕೀತು ಮಾಡಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕು ಎಂದಿದ್ದಾರೆ. ಈ ಸಮಿತಿಯಲ್ಲಿ ಪರಮೇಶ್ವರ, ಎಚ್‌.ಕೆ.ಪಾಟೀಲ ಸೇರಿದಂತೆ ಅನೇಕ ಹಿರಿಯ ನಾಯಕರಿದ್ದಾರೆ. ಅವರು ಸಭೆಗೆ ಕರೆದಾಗ ನಾನು ಹೋಗುತ್ತೇನೆ. ಅಲ್ಲಿನ ಆಗು ಹೋಗುಗಳ ಬಗ್ಗೆ ಮಾಹಿತಿ ಕೊಡುತ್ತ ಹೋಗುತ್ತೇವೆ ಎಂದರು.

ಅಮೇರಿಕಾದಲ್ಲಿ ಡಿಕೆಶಿ, ರಾಹುಲ್ ಗಾಂಧಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ನಮ್ಮ ನಾಯಕರು ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರಲ್ಲಿ ಕುತೂಹಲ ಏನಿಲ್ಲ. ಅವರಿಬ್ಬರು ಭೇಟಿಯಾಗಿದ್ದು ಖುಷಿಯ ವಿಚಾರ. ಅಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆದಿಲ್ಲ. ಅದರ ಬಗ್ಗೆ ಪದೇ ಪದೇ ನನ್ನ ಕೇಳಬೇಡಿ ಎಂದರು.

ಕಡಿಮೆ ಇವೆ. ಸದ್ಯದ ಸರ್ವೆ ರಿಪೋರ್ಟ್ ಪ್ರಕಾರ ಕೆಲ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂಬ ಮಾಹಿತಿ ಇದೆ. ಹೀಗಾಗಿ ಸರ್ಕಾರ ಬೀಳುವ ಭಯ ಬಿಜೆಪಿಯವರಿಗಿದೆ. ನಮಗಲ್ಲ. ನಾವು 136 ಜನ ಶಾಸಕರಿದ್ದೇವೆ. ಐದು ವರ್ಷ ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಪತನವಾಗುವುದಿಲ್ಲ. ಸಿಎಂ ಬದಲಾವಣೆ ಇಲ್ಲ ಎಂದು ನಮ್ಮ ಹೈಕಮಾಂಡ್ ಜನರಲ್ ಸೆಕ್ರೆಟ್ರಿ ಅವರೇ ಸ್ಪಷ್ಟಿಕರಣ ಕೊಟ್ಟಿದ್ದಾರೆ. ಎಲ್ಲ ಶಾಸಕರು, ಸಚಿವರು, ಸಂಸದರು, ನಾಯಕರು, ಕಾರ್ಯಕರ್ತರು ಸಿದ್ದರಾಮಯ್ಯ ಪರವಾಗಿದ್ದೇವೆ. ನಾವು ಸಿದ್ದರಾಮಯ್ಯ ಪರವಾಗಿ ಗಟ್ಟಿಯಾಗಿರುತ್ತೇವೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದರು.

ಖಾನಾಪುರದ ಬಿಜೆಪಿ ಶಾಸಕ ವಿಠಲ ಹಲಗೇಕರ ಅವರು ಸತೀಶ ಜಾರಕಿಹೊಳಿ ಅವರೇ ಸಿಎಂ ಆಗಲಿ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಲಾಡ್, ಅವರು ಆ ರೀತಿ ಹೇಳಿದ್ದಕ್ಕೆ ಬಿಜೆಪಿಯವರನ್ನೇ ಕೇಳಬೇಕು. ಅವರೇನು ನನ್ನ ಕಂಟ್ರೋಲ್‌ನಲ್ಲಿ ಇಲ್ಲ ಎಂದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *