Breaking News

ಬೈಕ್ ಸರಿಯಾಗಿ ದುರಸ್ತಿ ಮಾಡಿಲ್ಲ ಎಂದು ಶೋರೂಂಗೆ ಬೆಂಕಿ ಹಚ್ಚಿದ ವ್ಯಕ್ತಿ

ಕಲಬುರಗಿ: ತನ್ನ ಬೈಕ್‌ ಸರಿಯಾಗಿ ದುರಸ್ತಿ ಮಾಡಿಲ್ಲ ಎಂಬ ಕೋಪದಲ್ಲಿ ವ್ಯಕ್ತಿಯೊಬ್ಬರು ಹುಮನಾಬಾದ್ ಮುಖ್ಯರಸ್ತೆಯಲ್ಲಿನ ಓಲಾ ಎಲೆಕ್ಟ್ರಿಕ್‌ ವಾಹನದ ಶೋರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ನಗರದ ನಿವಾಸಿ ಮಹಮದ್ ನದೀಮ್ ಬೆಂಕಿ ಹಚ್ಚಿದ ಆರೋಪಿ ಎಂದು ತಿಳಿದುಬಂದಿದೆ.
ಮಂಗಳವಾರ ಬೆಳಿಗ್ಗೆ 10ರ ಸುಮಾರಿಗೆ ಶೋರೂಂಗೆ ಬಂದ ನದೀಮ್, ತನ್ನ ಎಲೆಕ್ಟ್ರಿಕ್ ಬೈಕ್ ದುರಸ್ತಿಯ ಬಗ್ಗೆ ಶೋರೂಂ ಸಿಬ್ಬಂದಿ ಜತೆಗೆ ವಾಗ್ವಾದ ನಡೆಸಿದರು. ಸರಿಯಾದ ಸ್ಪಂದನೆ ಸಿಗದಿರುವುದಕ್ಕೆ ಕೋಪದಲ್ಲಿ ಶೋರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಬೆಂಕಿಯ ಕೆನ್ನಾಲಿಗೆಗೆ ಬೈಕ್‌ಗಳು, ಸಾಮಗ್ರಿಗಳು ಸುಟ್ಟಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಿದರು.
ಶೋರೂಂಗೆ ಬೆಂಕಿ ಹಚ್ಚಿದ ಆರೋಪದಡಿ ಮಹಮದ್ ನದೀಮ್‌ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *