Breaking News

ಸೆ. 12 ರಂದು ಡಾ.ಮಲ್ಲಿಕಾರ್ಜುನ ಮಸಸೂರ ಅವರ 32 ನೇ ಪುಣ್ಯಸ್ಮರಣೆ

ಧಾರವಾಡ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಡಾ.ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಸಹಯೋಗದಲ್ಲಿ ಪದ್ಮವಿಭೂಷಣ ಡಾ.ಮಲ್ಲಿಕಾರ್ಜುನ ಮಸಸೂರ ಅವರ 32 ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 12, 2024 ರಂದು ಬೆಳಿಗ್ಗೆ 9.30 ಗಂಟೆಗೆ ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಆವರಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಸದಸ್ಯ ಹಾಗೂ ಖ್ಯಾತ ಹಿಂದೂಸ್ತಾನಿ ಸಂಗೀತ ಕಲಾವಿದರಾದ ಪಂ. ಎಂ. ವೆಂಕಟೇಶ ಕುಮಾರ ಅವರು ಪಾಲ್ಗೊಳ್ಳಲಿದ್ದಾರೆ.

ಡಾ. ಮೃತ್ಯುಂಜಯ ಅಗಡಿ, ಉಡುಪಿಯ ಡಾ. ಮಿಥುನ ಚಕ್ರವರ್ತಿ ಹಾಗೂ ಅಕ್ಕಮಹಾದೇವಿ ಆಲೂರು ಅವರು ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಹ ಕಲಾವಿದರಾದ ತಬಲಾ ವಾದನವನ್ನು ಪಂ. ಅಲ್ಲಮಪ್ರಭು ಕಡಕೋಳ ಮತ್ತು ಹಾರ್ಮೋನಿಯಂವನ್ನು ಡಾ.ಪರಶುರಾಮ ಕಟ್ಟಿಸಂಗಾವಿ ಅವರು ನಿರ್ವಹಿಸುವರು. ಕಾರ್ಯಕ್ರಮದಲ್ಲಿ ಟ್ರಸ್ಟ್‍ನ ಸರ್ವಸದಸ್ಯರು ಭಾಗವಹಿಸುವರು ಎಂದು ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *