ನವದೆಹಲಿ: ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅವರು ನವದೆಹಲಿಯಲ್ಲಿಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಮೀನುಗಾರಿಕಾ ವಲಯದಲ್ಲಿ ಉತ್ಪಾದನೆ ಮತ್ತು ಸಂಸ್ಕರಣಾ ಕ್ಲಸ್ಟರ್‌ಗಳ ಮೇಲೆ ಪ್ರಮಾಣಿತ ಕಾರ್ಯಾಚರಣೆಯ ವಿಧಾನವನ್ನು ಅವರು ಇದೇ ವೇಳೆ ಬಿಡುಗಡೆ ಮಾಡಲಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಅಡಿಯಲ್ಲಿ ರಾಷ್ಟ್ರೀಯ ಆದ್ಯತೆಯ ಯೋಜನೆಗಳಿಗೆ ಇದು ಸಾಕ್ಷಿಯಾಗಲಿದೆ.
ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರಾದ ಎಸ್.ಪಿ.ಸಿಂಗ್ ಬಾಘೇಲ್ ಮತ್ತು ಜಾರ್ಜ್ ಕುರಿಯನ್, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ಪ್ರಧಾನ ಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಯೋಜನೆಯ ಫಲಾನುಭವಿಗಳು, ಮೀನುಗಾರರು ಮತ್ತು ಮೀನು ಕೃಷಿಕರು ಭಾಗವಹಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

