ಕೋಲಾರ: ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲು ಮುಂದಾಗುವ ಅಧಿಕಾರಿಗಳು ಒತ್ತುವರಿ ತೆರವಿಗು ಮುಂಚೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೆ ಮಾಡಿ ನಂತರ ಒತ್ತುವರಿ ತೆರವುಗೊಳಿಸಲು ಮುಂದಾಗಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಂಸದ ಮಲ್ಲೇಶ್ ಬಾಬು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದಿಶಾ ಸಭೆಯಲ್ಲಿ ಅಧ್ಯಕ್ಷತೆ ವಹಿತಿ ಮಾತನಾಡಿ ಅಧಿಕಾರಿಗಳು ಕೇಂದ್ರ ಸರ್ಕಾರದ ಯೋಜನೆಗಳನ್ನು ಕಟ್ಟ ಕಡೆಯ ವ್ಯಕ್ತಿಗೆ ತಲುಪುವಂತೆ ಕ್ರಮ ವಹಿಸಬೇಕಾಗಿದೆ ಆಯಾ ಇಲಾಖೆ ವ್ಯಾಪ್ತಿಯಲ್ಲಿ ಅಭಿವೃದ್ದಿಗಾಗಿ ಬೇಕಿರುವ ವರದಿಯನ್ನು ಸಿದ್ದಪಡಿಸಿ ನೀಡಿದ್ದಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಲು ಕ್ರಮ ವಹಿಸುತ್ತೇನೆ ತಪ್ಪದೇ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಒಂದು ತಿಂಗಳೊಳಗೆ ವರದಿ ಕೊಡಿ ಎಂದು ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

