ಕನಚಕ್: ಗಡಿ ಆಚೆಯಿಂದ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಬಿಎಸ್‌ಎಫ್ ಯೋಧ ಗಾಯಗೊಂಡಿರುವ ಘಟನೆ ಅಖ್ನೂರ್‌ನಲ್ಲಿರುವ ಕನಾಚಕ್‌ನಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಬುಧವಾರ ಮುಂಜಾನೆ ಜಮ್ಮು ಜಿಲ್ಲೆಯ ಅಖ್ನೂರ್ ಪ್ರದೇಶದಲ್ಲಿರುವ ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ.
ಈ ಅವಘಡದಲ್ಲಿ ಬಿಎಸ್‌ಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಡಿಯಾಚೆಗಿನ ಅಪ್ರಚೋದಿತ ಗುಂಡಿನ ದಾಳಿಗೆ ಬಿಎಸ್‌ಎಫ್ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಪಾಕಿಸ್ತಾನದ ಭಾಗದಲ್ಲಿ ಎಷ್ಟು ಸಾವುನೋವುಗಳಾಗಿವೆ ಎಂಬುದರ ಕುರಿತು ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

