Breaking News

ಮುನೇನಕೊಪ್ಪ ಅವರ ಆರೋಪಕ್ಕೆ ಲಾಡ್ ಪ್ರತಿಕ್ರಿಯೆ

ಧಾರವಾಡ: ನವಲಗುಂದ ತಾಲೂಕಿನಲ್ಲಿ ಅವೈಜ್ಞಾನಿಕವಾಗಿ ಚಕ್ಕಡಿ ರಸ್ತೆ ನಿರ್ಮಾಣ ಮಾಡುವುದರ ಜೊತೆಗೆ ಪಾರಂಪರಿಕ ಗುಡ್ಡದ ಮಣ್ಣಿನಲ್ಲಿ ಅವ್ಯವಹಾರ ನಡೆಸಲಾಗುತ್ತಿದೆ ಎಂದು ಆರೋಪ ಮಾಡಿರುವ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಆರೋಪಕ್ಕೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಶಂಕರ ಪಾಟೀಲ ಮುನೇನಕೊಪ್ಪ ಅವರು ನನ್ನ ಸ್ನೇಹಿತರು. ರಾಜಕಾರಣದಲ್ಲಿ ಈ ರೀತಿ ಆರೋಪ ಮಾಡುವುದು ಸಹಜ. ಈ ಬಗ್ಗೆ ತನಿಖೆ ನಡೆಯಬೇಕು. ಸರ್ಕಾರ ಇದೆ, ಸಮಿತಿಗಳೂ ಇವೆ. ಈ ಬಗ್ಗೆ ನಾವು ಖಂಡಿತ ಪ್ರತಿಕ್ರಿಯೆ ನೀಡುತ್ತೇವೆ ಎಂದರು.

ನವಲಗುಂದ ಭಾಗದಲ್ಲಿ ವಿವಿಧ ಕಾಮಗಾರಿಗಳನ್ನು ತಮಗೆ ಬೇಕಾದವರಿಗೆ ಶಾಸಕರು ಗುತ್ತಿಗೆ ನೀಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಲಾಡ್, ಆ ರೀತಿ ಗುತ್ತಿಗೆ ನೀಡಲಾಗುವುದಿಲ್ಲ. ಟೆಂಡರ್ ಆಧಾರದ ಮೇಲೆ ಗುತ್ತಿಗೆ ನೀಡಲಾಗುತ್ತದೆ. ಆ ರೀತಿ ಯಾವುದಾದರೂ ದಾಖಲೆಗಳಿದ್ದರೆ ಕೊಡಿ ಪರಿಶೀಲನೆ ಮಾಡುತ್ತೇವೆ ಎಂದರು.

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *