Breaking News

ಸಂಡೂರು ಉಪ ಚುನಾವಣೆ ಕುರಿತು ಬಿಜೆಪಿ ಮಹತ್ವದ ಘೋಷಣೆ

ಬಳ್ಳಾರಿ: ಲೋಕಸಭೆ ಚುನಾವಣೆ 2024ರ ಬಳಿಕ ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ಸಹ ಒಂದು. ಸಂಡೂರು ವಿಧಾನಸಭಾ ಕ್ಷೇತ್ರದಿಂದ 2023ರ ಚುನಾವಣೆಯಲ್ಲಿ ಜಯಗಳಿಸಿದ್ದ ಕಾಂಗ್ರೆಸ್‌ ನಾಯಕ ಇ.ತುಕಾರಾಂ ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಾವುದೇ ಕ್ಷಣದಲ್ಲಿ ಚುನಾವಣಾ ಆಯೋಗ ಸಂಡೂರು ಉಪ ಚುನಾವಣೆ ದಿನಾಂಕ ಘೋಷಣೆ ಮಾಡಬಹುದು.
ಕರ್ನಾಟಕ ಬಿಜೆಪಿ ಸಂಡೂರು ಉಪ ಚುನಾವಣೆ ಕುರಿತು ಬುಧವಾರ ಮಹತ್ವದ ಘೋಷಣೆ ಮಾಡಿದೆ. ಸಂಡೂರಿನಲ್ಲಿ ಮಾತನಾಡಿದ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಈ ಘೋಷಣೆಯನ್ನು ಮಾಡಿದ್ದು, ಅವರ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.
ರಾಧಾ ಮೋಹನ್ ದಾಸ್ ಅಗರ್ವಾಲ್, ಸಂಡೂರು ಕ್ಷೇತ್ರದ ಉಪ ಚುನಾವಣೆಗೆ ಬಿ. ಶ್ರೀರಾಮುಲು ಬಿಜೆಪಿಯ ಅಭ್ಯರ್ಥಿಯಲ್ಲ. ಅವರು ಟಿಕೆಟ್ ಆಕಾಂಕ್ಷಿಯೂ ಅಲ್ಲ. ಅವರನ್ನು ನಾವು ಬಳ್ಳಾರಿಯ ಸಂಸದರಾಗಿ ಮಾಡುತ್ತೇವೆ ಎಂದು ಘೋಷಣೆ ಮಾಡಿದರು.
2023ರ ವಿಧಾನಸಭೆ ಚುನಾವಣೆ, 2024ರ ಲೋಕಸಭೆ ಚುನಾವಣೆಯಲ್ಲಿ ಸೋತ ಬಿ. ಶ್ರೀರಾಮುಲು ಸಂಡೂರು ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ ಬಿಜೆಪಿ ಬುಧವಾರ ಮಾಡಿರುವ ಘೋಷಣೆ ಅಚ್ಚರಿಗೆ ಕಾರಣವಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *