Breaking News

ಬಿಜೆಪಿ ಸರ್ಕಾರದ ಹಗರಣದ ತನಿಖೆ ನಡೆಸಲು ಸಚಿವ ಸಂಪುಟ ಉಪ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಕುರಿತು ಬುಧವಾರ ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಕುರಿತ ತನಿಖೆಗಳ ಪ್ರಗತಿ ಹಾಗೂ ಸಮನ್ವಯ ಸಂಬಂಧ ಕ್ರಮ ವಹಿಸುವ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ.
ಸಮಿತಿಯು ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸರ್ಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *