Breaking News

ಹದಗೆಟ್ಟ ಭೀಮಾನದಿ ಸೇತುವೆ: ಭಾರೀ ವಾಹನಗಳ ಸಂಚಾರ ನಿಷೇಧ

ವಡಗೇರಾ: ತಾಲ್ಲೂಕಿನ ಗುರುಸುಣಿಗಿ ಕ್ರಾಸ್‌ನಿಂದ ಯಾದಗಿರಿ ನಗರಕ್ಕೆ ಹೋಗುವ ರಾಜ್ಯ ಹೆದ್ದಾರಿಯ ಭೀಮಾ ನದಿಯ ಹಳೆಯ ಸೇತುವೆಯ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಗುರುಸುಣಿಗಿ ಕ್ರಾಸ್‌ನಿಂದ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಹೊಸ ಬ್ರಿಜ್ ಕಂಬ್ಯಾರೇಜು ಮೂಲಕ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ.
ಗುರುಸುಣಿಗಿ ಗ್ರಾಮದ ಕ್ರಾಸ್ ಹತ್ತಿರ ಬ್ಯಾರಿಕೇಡ್ ಹಾಕಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಯಾದಗಿರಿ ನಗರದ ಸಮೀಪದಲ್ಲಿ ರೈಲ್ವೆ ಸೇತುವೆಯ ಹತ್ತಿರ ಭೂ ಕುಸಿತ ಹಾಗೂ ಭೀಮಾ ನದಿಯ ಹಳೆಯ ಸೇತುವ ಮೇಲೆ ಇರುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಕ್ರಮವನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *