Breaking News

ಜಮ್ಮುಮತ್ತುಕಾಶ್ಮೀರ ಚುನಾವಣೆ: ಕಾಂಗ್ರೆಸ್ ನಿಂದ 5 ಗ್ಯಾರಂಟಿಗಳನ್ನು ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಉದ್ಯಮಿಗಳಿಗೆ ಐದು ಲಕ್ಷದವರೆಗೆ ಬಡ್ಡಿ ರಹಿತ ಸಾಲ ಸೇರಿದಂತೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಘೋಷಿಸಿದ್ದಾರೆ.
ದಕ್ಷಿಣ ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ನಡೆಸಿದ ಖರ್ಗೆ, ಮಹಿಳಾ ಉದ್ಯಮಿಗಳಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಪ್ರತಿ ಕುಟುಂಬಕ್ಕೆ 25 ಲಕ್ಷ ಆರೋಗ್ಯ ವಿಮೆ, ಕುಟುಂಬದ ಯಜಮಾನಿಗೆ ಮಾಸಿಕ 3,000 ಹಣ, ಜೊತೆಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯಗಳನ್ನು ನೀಡುವ ನೀಡುವ ಯೋಜನೆಯ ಮರುಜಾರಿ ಮಾಡುವುದಾಗಿ ಭರವಸೆ ನೀಡಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಭರವಸೆ ನೀಡಿದಂತೆ ವಲಸೆ ಕಾಶ್ಮೀರ ಪಂಡಿತರಿಗೆ ಪುನರ್ವಸತಿ ಕಲ್ಪಿಸಲಾಗುವುದು. ಅಲ್ಲದೆ, ಒಬಿಸಿ ಸಮುದಾಯದವರು ಕೂಡ ಸಂವಿಧಾನದಲ್ಲಿ ನಮೂದಿಸಿದಂತೆ ಹಕ್ಕುಗಳನ್ನು ಸಹ ಪಡೆಯಲಿದ್ದಾರೆ ಎಂದು ಖರ್ಗೆ ಅವರು ಭರವಸೆ ನೀಡಿದರು.
ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ, ಕೇಂದ್ರ ಸರ್ಕಾರ ಯಾವ ಕೈಗಾರಿಕೆಗಳನ್ನು ಕಾಶ್ಮಿರಕ್ಕೆ ಬರುವಂತೆ ಮಾಡಿಲ್ಲ, ಇದರಿಂದಲೇ ಉದ್ಯೋಗ ಸೃಷ್ಟಿಯಾಗಿಲ್ಲ. ನಾವು ಪ್ರವಾಸೋದ್ಯಮ ಮತ್ತು ಉತ್ಪಾದನೆ ಕಡೆ ಗಮನ ಹರಿಸುತ್ತೇವೆ. ಕಳೆದ ಹಲವಾರು ವರ್ಷಗಳಿಂದ 4,400 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ ಅವುಗಳು ಮತ್ತೆ ಆರಂಭಿಸುತ್ತೇವೆ ಎಂದು ಹೇಳಿದರು. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುತ್ತೇವೆ ಎಂದು ಭರವಸೆ ನೀಡಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *