Breaking News

ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಭಾರತವೇ ಚಾಲಕಶಕ್ತಿ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಜಗತ್ತಿನ ಪ್ರತಿಯೊಂದು ಉಪಕರಣದಲ್ಲೂ ಭಾರತ ನಿರ್ವಿುತ ಚಿಪ್ ಹೊಂದಿರಬೇಕು ಎನ್ನುವುದು ನಮ್ಮ ಕನಸಾಗಿದೆ. ಚಿಪ್ ಡಿಸೈನಿಂಗ್​ನಲ್ಲಿ ಶೇಕಡ 20ರಷ್ಟು ಪ್ರತಿಭೆಗಳ ಕೊಡುಗೆ ಭಾರತದಿಂದ ಆಗುತ್ತಿದೆ, ಮುಂಬರುವ ದಿನಗಳಲ್ಲಿ ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಭಾರತವೇ ಚಾಲಕಶಕ್ತಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ಗ್ರೇಟರ್ ನೋಯ್ಡಾದ ನಾಲೇಜ್ ಪಾರ್ಕ್​ನಲ್ಲಿ ಸೆಮಿಕಾನ್ ಇಂಡಿಯಾ 2024 ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸೆಮಿಕಂಡಕ್ಟರ್ ತಯಾರಿಕೆಯಲ್ಲಿ 1.5 ಲಕ್ಷ ಕೋಟಿ ರೂ.ಗೂ ಅಧಿಕ ಹೂಡಿಕೆ ಮಾಡಲಾಗಿದೆ. ಇದರ ಪರಿಣಾಮವಾಗಿ ಹಲವು ಯೋಜನೆಗಳು ಪ್ರಗತಿಯಲ್ಲಿವೆ. ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ಸಮಗ್ರ, ಸ್ಥಿರ ನೀತಿ ಮತ್ತು ಸುಲಭವಾಗಿ ವ್ಯವಹರಿಸುವ ವ್ಯವಸ್ಥೆಯನ್ನು ಒದಗಿಸುತ್ತದೆ. ಭಾರತದಲ್ಲಿ ಹೂಡಿಕೆ ಮಾಡಲು ಇದುವೇ ಸರಿಯಾದ ಸಮಯ ಎಂದು ಕರೆ ನೀಡಿದರು.
ಜಾಗತಿಕ ಸೆಮಿಕಂಡಕ್ಟರ್ ಉದ್ಯಮಕ್ಕೆ ಸಂಬಂಧಿಸಿದಂತೆ ಬೃಹತ್ ಸಮಾವೇಶ ಆಯೋಜಿಸುತ್ತಿರುವ ವಿಶ್ವದ 8ನೇ ದೇಶ ಭಾರತವಾಗಿದೆ, ಭಾರತದಲ್ಲಿ ಇರಲು ಇದುವೇ ಸರಿಯಾದ ಸಮಯವಾಗಿದೆ ನೀವು ಸರಿಯಾದ ಸಮಯದಲ್ಲಿ ಸರಿಯಾದ ಜಾಗದಲ್ಲಿದ್ದೀರಿ, 21ನೇ ಶತಮಾನದಲ್ಲಿ ಭಾರತವು ಇಡೀ ವಿಶ್ವಕ್ಕೆ ಭರವಸೆಯಾಗಿದೆ. ತಂತ್ರಜ್ಞಾನ ಆಧಾರಿತ ಮಾರುಕಟ್ಟೆ ಹಾಗೂ ಬೆಳೆಯುತ್ತಿರುವ ಉತ್ಪಾದನಾ ನೆಲೆಯಾಗಿ ಭಾರತ ಸರ್ಕಾರವು ವಿಶಿಷ್ಟ ಮಾರುಕಟ್ಟೆಯನ್ನು ಒದಗಿಸುತ್ತದೆ ಎಂದು ಮೋದಿ ಹೇಳಿದರು.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಉಪಸ್ಥಿತರಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *