Breaking News

11 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಣೆ: ಈಶ್ವರ ಖಂಡ್ರೆ

ಬೆಂಗಳೂರು: ಕಳೆದ 18 ತಿಂಗಳಲ್ಲಿ ಅರಣ್ಯ ಇಲಾಖೆ ಸುಮಾರು 11 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ.
ಜತೆಗೆ ಬೆಂಗಳೂರು, ಕೋಲಾರ, ಬೀದರ್‌ ಸೇರಿ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ. ಬೆಲೆ ಬಾಳುವ 10 ಸಾವಿರ ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರಳಿ ವಶಕ್ಕೆ ಪಡೆಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.
ಅವರು ಬೆಂಗಳೂರಿನ ಅರಣ್ಯ ಭವನದಲ್ಲಿ ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಮಾತನಾಡಿದರು.
2015ಕ್ಕೂ ಮುನ್ನ ರಾಜ್ಯ ಸರಕಾರದ ನಡವಳಿಗೆ ಮೊದಲು ಪಟ್ಟಾ ಜಮೀನು ಮತ್ತು ಅರಣ್ಯ ಭೂಮಿ ಒತ್ತುವರಿ ಸೇರಿ 3 ಎಕರೆ ಮೀರದ ಹಾಗೂ ಅರಣ್ಯ ಹಕ್ಕು ಕಾಯಿದೆ ವಿಲೇವಾರಿಯಾಗದ ಅರ್ಜಿ ಪ್ರಕರಣಗಳ ಹೊರತಾಗಿ ದೊಡ್ಡ ಮಟ್ಟದ ಅರಣ್ಯ ಒತ್ತುವರಿ ತೆರವು ಮಾಡಿಸಲು ಸ್ಪಷ್ಟ ಆದೇಶ ನೀಡಲಾಗಿದೆ. ಆದರೆ ಕೆಲವೊಬ್ಬರು ಜನರಿಗೆ ತಪ್ಪು ಮಾಹಿತಿ ನೀಡಿ, ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ‌ ಈ ಕುರಿತು ಅಧಿಕಾರಿಗಳು ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕು ಎಂದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *