ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ
ಗ್ರಾಮದ ಪ್ರಗತಿಪರ ರೈತ ಹಾಗೂ ಧಾರವಾಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಚನ್ನಬಸಪ್ಪ ಮಸೂತಿ (67) ಅವರು ಹೃದಯಾಘಾತದಿಂದ ನಿಧನರಾದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವಿದೆ.
ಚನ್ನಬಸಪ್ಪ ಮಸೂತಿ ಅವರು ಸಾವಯವ ಕೃಷಿಯಲ್ಲಿ ಹೆಸರು ಮಾಡಿದವರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಗಣನೀಯ ಸೇವೆ ಸಲ್ಲಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

