ಧಾರವಾಡ: ಧಾರವಾಡದ ಸೂಪರ್ ಮಾರುಕಟ್ಟೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಮಾರುಕಟ್ಟೆಯಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು.
ಇದೇ ವೇಳೆ ಅಲ್ಲಿನ ವ್ಯಾಪಾರಿಗಳಿಂದ ಸಚಿವರು ಅಹವಾಲುಗಳನ್ನು ಸ್ವೀಕರಿಸಿದರು. ಮಾರುಕಟ್ಟೆಯನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಶೆಡ್‌ನ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ವ್ಯಾಪಾರಿಗಳಿಗೆ ಭರವಸೆ ನೀಡಿದರು.
ಮಾರುಕಟ್ಟೆಯಲ್ಲಿ ಇಂದಿರಾ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗುವುದು. ಶೌಚಾಲಯವನ್ನೂ ಡಿಸೆಂಬರ್ ಒಳಗೆ ವ್ಯಾಪಾರಿಗಳಿಗೆ ಬೇಕಾದ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪಾಲಿಕೆ ಆಯುಕ್ತರು, ಮುಖಂಡರಾದ ಶಿವಲೀಲಾ ವಿನಯ್ ಕುಲಕರ್ಣಿ ಹಾಗೂ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

