ಹುಬ್ಬಳ್ಳಿ: ಫೈ ಓವರ್ ಕಾಮಗಾರಿ ವೇಳೆ ನಡೆದಿರುವ ಅವಘಡ ಸಾಕಷ್ಟು ನೋವನ್ನುಂಟು ಮಾಡಿದೆ. ಕಾಮಗಾರಿ ವೇಳೆಯಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅಲ್ಲದೇ ಈ ಬಗ್ಗೆ ರಾಜ್ಯ ಸರ್ಕಾರ ವಿಶೇಷ ಗಮನ ಹರಿಸುವ ಮೂಲಕ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಫೈ ಓವರ್ ಕಾಮಗಾರಿ ಅವಘಡದಲ್ಲಿ ಎಎಸ್‌ಐ ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇಲ್ಲಿನ ಜನರ ಆಶೀರ್ವಾದದಿಂದ ಕೇಂದ್ರ ಸಚಿವನಾಗಿದ್ದು, ಕೇಂದ್ರದಿಂದ ಸಾಕಷ್ಟು ಅನುದಾನವನ್ನು ಮಹಾನಗರ ವ್ಯಾಪ್ತಿಯಲ್ಲಿನ ಹುಬ್ಬಳ್ಳಿ- ಧಾರವಾಡಕ್ಕೆ ಕೊಟ್ಟಿದ್ದೇವೆ. ಫೈ ಓವರ್ ಕಾಮಗಾರಿಗೂ ಸಾಕಷ್ಟು ಅನುದಾನ ಕೊಟ್ಟಿದ್ದೇವೆ. ಸರಿಯಾಗಿ ಅನುಷ್ಠಾನ ಮಾಡುವ ಹಾಗೂ ಕಾಮಗಾರಿ ಬಗ್ಗೆ ನಿಗಾ ವಹಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದು. ಈ ಬಗ್ಗೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಿದೆ ಎಂದರು.
ಕೇಂದ್ರ ಸರ್ಕಾರ ಅನುದಾನ ಕೊಟ್ಟಿದೆ. ಕೇಂದ್ರಕ್ಕೆ ಏನೇನೂ ಸಂಬಂಧವಿಲ್ಲ. ಆದರೆ, ಇದನ್ನು ಫಾಸ್ಟ್ ಮಾಡುವ ಹಾಗೂ ಸುರಕ್ಷತೆಯನ್ನು ಕೈಗೊಳ್ಳುವ ಕೆಲಸ ರಾಜ್ಯ ಸರ್ಕಾರ ಮಾಡಬೇಕಿದೆ. ನ್ಯಾಷನಲ್ ಹೈವೇನೂ ಅಲ್ಲ, ಸ್ಟೇಟ್ ಹೈವೇ ಅಲ್ಲದಿದ್ದರೂ ಸಾಕಷ್ಟು ಮುತುವರ್ಜಿಯಿಂದ ಅನುದಾನ ಕೊಡಿಸಿದ್ದೇನೆ. ಈ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ದೇಶನ ಪಾಲನೆ ಮಾಡುವ ಮೂಲಕ ಕಾಮಗಾರಿ ವೇಗ ಹೆಚ್ಚಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಬೇಕಿದೆ ಎಂದು ಅವರು ಸೂಚನೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

