Breaking News

ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ವಹಿಸಿರುವುದು ಏಕೆ: ಸುರಭಿ ಹುದಿಗೇರಿ

ಹುಬ್ಬಳ್ಳಿ: ವಾಲ್ಮೀಕಿ ಹಗರಣದಲ್ಲಿ ಇಡಿ ಚಾರ್ಜ್ ಶೀಟ್ ದಾಖಲಿಸಿದೆ. ಅದರಲ್ಲಿ ಆತಂಕಕಾರಿ ವಿಷಯವನ್ನು ಹೊರಹಾಕಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ವಹಿಸಿರುವುದು ಏಕೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹುದಿಗೇರಿ ಪ್ರಶ್ನಿಸಿದರು.

ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಎಸ್‌.ಟಿ ಸಮುದಾಯಕ್ಕೆ ಸೇರಬೇಕಾದ ಹಣ ಚುನಾವಣೆಯಲ್ಲಿ ಬಳಕೆಯಾಗಿರುವ ಆತಂಕಕಾರಿ ಅಂಶ ಇಡಿ ಚಾರ್ಜ್ ಶೀಟ್ ನಲ್ಲಿ ಬಹಿರಂಗಗೊಂಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮೌನ ವಹಿಸದೇ ರಾಜ್ಯದ ಜನತೆಗೆ ಸ್ಪಷ್ಟತೆ ನೀಡಬೇಕು ಎಂದು ಆಗ್ರಹಿಸಿದರು.

ಕಳೆದ ಹದಿನಾರು ತಿಂಗಳುಗಳಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಹಲವಾರು ಕಳಂಕಗಳ ದಾಖಲೆಯನ್ನು ನಿರ್ಮಿಸಿದೆ. ಭ್ರಷ್ಟಾಚಾರದಲ್ಲಿ ತೊಡಗಿದ್ದು, ಕಳಂಕದ ಆಡಳಿತವನ್ನು ನಡೆಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *