Breaking News

ಕಾಶ್ಮೀರದ 19 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಣೆ

ಜಮ್ಮು ಮತ್ತು ಕಾಶ್ಮೀರ: ವಿಧಾನಸಭಾ ಚುನಾವಣೆಗೆ ಬಿಜೆಪಿ ಸಕಲ ತಯಾರಿ ಮಾಡಿಕೊಂಡಿದ್ದು, ಮೂರನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ ಕಾಶ್ಮೀರ ಭಾಗದಲ್ಲಿ ಬಿಜೆಪಿ 19 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡುವುದಾಗಿ ಸ್ಪಷ್ಟನೆ ನೀಡಿದೆ.
ಬುಧವಾರ ಸಂಜೆ ಪಕ್ಷದ ಅಧಿಕೃತ ಪ್ರಕಟಣೆಯಲ್ಲಿ ಕಾಶ್ಮೀರಕ್ಕೆ ಯಾವುದೇ ಹೊಸ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 90 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ, ಇದರಲ್ಲಿ ಕಾಶ್ಮೀರದಲ್ಲಿ 47 ಕ್ಷೇತ್ರಗಳು ಬರಲಿವೆ, ಈಗ ಇಲ್ಲಿ 19 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಿದರೆ ಉಳಿದ 28 ಕ್ಷೇತ್ರಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.
ಟಿಕೆಟ್ ಹಂಚಿಕೆ ವಿಚಾರವೇ ಇದೀಗ ಬಿಜೆಪಿಗೆ ದೊಡ್ಡ ತಲೆನೋವಾಗುವ ಸಾಧ್ಯತೆ ಇದೆ, 19 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸುವ ಕಾರಣ ಉಳಿದ 28 ಕ್ಷೇತ್ರಗಳ ಬಿಜೆಪಿ ನಾಯಕರಿಗೆ ನಿರಾಸೆಯಾಗಿದೆ. ಇದರಿಂದ ಬೇರೆ ಪಕ್ಷಗಳಿಗೆ ಸೇರುವ ಅಥವಾ ಆಂತರಿಕ ಭಿನ್ನಾಭಿಪ್ರಾಯಗಳು ಚುನಾವಣೆಯಲ್ಲಿ ಹಿನ್ನಡೆಗೆ ಕಾರಣವಾಗುವ ಆತಂಕ ಕೂಡ ಇದೆ.
ಮುಖ್ಯವಾಗಿ ಅಮಿತ್ ಶಾ ಕಾಶ್ಮೀರಕ್ಕೆ ಭೇಟಿ ನೀಡಿ ಪಕ್ಷದ ನಾಯಕರ ಜೊತೆ ಸಂವಾಸ ಮಾಡುವ ವೇಳೆ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದರು. ಜಮ್ಮು ಪ್ರಾಂತ್ಯದ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 90 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಚುನಾವಣೆಗೆ ಸಜ್ಜಾಗಲು ಪಕ್ಷದ ನಾಯಕರು, ಕಾರ್ಯಕರ್ತರಿಗೆ ಕರೆ ನೀಡಿದ್ದರು.
ಆದರೆ ಬಿಜೆಪಿ ಇದೀಗ ಕಾಶ್ಮೀರದಲ್ಲಿ 19 ಸ್ಥಾನಗಳಲ್ಲಿ ಮಾತ್ರ ಸ್ಪರ್ಧೆಗೆ ಒಪ್ಪಿಕೊಂಡಿದ್ದೇಕೆ ಎನ್ನುವ ಪ್ರಶ್ನೆಗ ಉತ್ತರ ಸಿಕ್ಕಿಲ್ಲ. ಇದೊಂದು ರಾಜಕೀಯ ತಂತ್ರವಾಗಿದ್ದು ಗೆಲ್ಲುವ ಸಾಧ್ಯತೆ ಹೆಚ್ಚಾಗಿರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲು ಸಜ್ಜಾಗಿದೆ ಎನ್ನಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *