ಧಾರವಾಡ: ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ಪುತ್ರ ಕರಣ್ ಲಾಡ್ ಅವರು ತಮ್ಮ 17ನೇ ವಯಸ್ಸಿನಲ್ಲೇ ‘ಎ ಗ್ಲಿಚ್ ಇನ್ ದಿ ಸಿಮ್ಯುಲೇಷನ್’ ಎಂಬ ಪುಸ್ತಕವನ್ನು ಬರೆದಿದ್ದಾರೆ. ಈಗ ಈ ಪುಸ್ತಕವನ್ನು ‘ಪ್ರತ್ಯನುಕರಣೆಯ ನ್ಯೂನತೆಗಳು’ ಎಂಬ ಹೆಸರಿನಲ್ಲಿ ಅನುವಾದ ಮಾಡಲಾಗಿದ್ದು, ಅನುವಾದಿತ ಈ ಪುಸ್ತಕವನ್ನು ಧಾರವಾಡದಲ್ಲಿ ಬಿಡುಗಡೆ ಮಾಡಲಾಯಿತು.
ಧಾರವಾಡದ ಸೃಜನಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರಣ್ಣ ರಾಜೂರ ಅವರು ಈ ಪುಸ್ತಕ ಬಿಡುಗಡೆ ಮಾಡಿದರು. ಡಾ.ವಿನಾಯಕ ನಾಯಕ ಮತ್ತು ಡಾ.ಲೋಹಿತ್ ನಾಯ್ಕರ್ ಅವರು ಕನ್ನಡಕ್ಕೆ ಈ ಪುಸ್ತಕವನ್ನು ಅನುವಾದಿಸಿದ್ದಾರೆ.
ಈ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ತೋಂಟದ ನಿಜಗುಣಾನಂದ ಸ್ವಾಮೀಜಿ, ಸಚಿವ ಸಂತೋಷ ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪುಸ್ತಕ ರಚನೆಕಾರ ಕರಣ್ ಲಾಡ್, ಮಾಜಿ ಸಂಸದ ಪ್ರೊ.ಐ.ಜಿ.ಸನದಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಕರಣ್ ಲಾಡ್ ಅವರು ಬೆಂಗಳೂರಿನ ಕಾಲೇಜೊಂದರಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದಾರೆ. ತತ್ವಜ್ಞಾನದಲ್ಲಿ ಆಸಕ್ತಿ ಹೊಂದಿರುವ ಅವರು, ‘ಎ ಗ್ಲಿಚ್ ಇನ್ ದಿ ಸಿಮ್ಯುಲೇಷನ್’ ಎಂಬ ಪುಸ್ತಕ ಬರೆದಿದ್ದು, ಈ ಪುಸ್ತಕ ಇದೀಗ ಕನ್ನಡಕ್ಕೆ ಅನುವಾದಗೊಳ್ಳುವ ಮೂಲಕ ಕವಿ, ಸಾಹಿತಿ ಹಾಗೂ ಸಾಹಿತ್ಯಾಸಕ್ತರ ನೆಲವಾದ ಧಾರವಾಡದಲ್ಲಿ ಬಿಡುಗಡೆಗೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

