Breaking News

100 ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ ಬಸ್ ಗಳು ಬಿಎಂಟಿಸಿ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ ಬಸ್ ಗಳನ್ನು ಬಿಎಂಟಿಸಿ ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ.
ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು. ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದರು ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *