Breaking News

ಮುಂದಿನ 4 ವರ್ಷ ನಾನೇ ಸಿಎಂ: ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ

ಬೆಂಗಳೂರು: ಮೂಡಾ‌ ಹಗರಣದಿಂದ ಸಿಎಂ ಸಿದ್ದರಾಮಯ್ಯ ಅವರ ಮೇಲೆ ವಿಪಕ್ಷ ನಾಯಕರು ದಾಳಿ ನಡೆಸುತ್ತಲೇ ಇದ್ದು, ಕೇಸ್ ಕೋರ್ಟ್ ನಲ್ಲಿ ನಡೆಯುತ್ತಿರುವ ಕಾರಣ ಸಿಎಂ ಸ್ಥಾನಕ್ಕೆ ಕುತ್ತು ಬರುತ್ತೆ, ಸರ್ಕಾರ ಪತನವಾಗುತ್ತೆ ಎಂದೇ ವಿಪಕ್ಷ ನಾಯಕರು ಹೇಳಿಕೆಗಳನ್ನ ನೀಡುತ್ತಿದ್ದಾರೆ.
ಇದರ ನಡುವೆ ನಾನು ಕೂಡ ಸಿಎಂ ಆಕಾಂಕ್ಷಿ, ನಾನ್ಯಾಕೆ ಸಿಎಂ ಆಗಬಾರದು ಅಂತ ಹನುಮಂತನ ಬಾಲ ಬೆಳೆದಂತೆ ಆಕಾಂಕ್ಷಿಗಳ ಲೀಸ್ಟ್ ಬೆಳೆಯುತ್ತಾ ಹೋಗುತ್ತಿದೆ. ಹೀಗಾಗಲೇ ಸಿಎಂ ರೇಸ್‌ನಲ್ಲಿ ಸತೀಶ್ ಜಾರಕಿಹೊಳಿ, ಆರ್ ವಿ ದೇಶಪಾಂಡೆ, ರಾಯರೆಡ್ಡಿ, ಶಾಮನೂರು ಶಿವಶಂಕರಪ್ಪ ಇದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಆಕಾಂಕ್ಷಿಗಳಿಗೆಲ್ಲಾ ಮಹತ್ವದ ಸಂದೇಶ‌ ಸಾರಿದ್ದಾರೆ. ಮುಂದಿನ ನಾಲ್ಕು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳಿದ್ದಾರೆ.
ಯಾರು ಕೂಡ ಸಿಎಂ ಆಗುತ್ತೇನೆ ಎಂದು ಹೇಳಿಕೆ ಕೊಟ್ಟಿಲ್ಲ ಈಗ ಸಿಎಂ ಖುರ್ಚಿ ಖಾಲಿಯೂ ಇಲ್ಲ ಖಾಲಿ ಆದಾಗ ನಾವೂ ಬರುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಡೌಟ್ ಇಲ್ಲ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಯಾರಿಗೂ ಸಿಎಂ ಬದಲಾವಣೆಯಾಗುತ್ತೆ ಎಂಬ ಅನುಮಾನವಿಲ್ಲ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಲಿ ಅಂತ ಸಚಿವರು ಪತ್ರ ಬರೆದಿದ್ದಾರೆ ಎಂದಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *