Breaking News

ಆಯುಷ್ಮಾನ್‌ ಭಾರತ್ ಯೋಜನೆಯನ್ನು 70 ವರ್ಷ ಮೇಲ್ಪಟ್ಟವರಿಗೂ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ: ವಿಶ್ವದ ಅತಿದೊಡ್ಡ ಆರೋಗ್ಯ ವಿಮೆ ಯೋಜನೆ ಎಂಬ ಹಿರಿಮೆ ಹೊಂದಿರುವ ಆಯುಷ್ಮಾನ್‌ ಪ್ಲಾನ್‌ ಭಾರತ್ ವಿಮಾ ಯೋಜನೆಯನ್ನು 70 ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ವಯೋಮಿತಿಯವರೆಗೂ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ವಯೋಮಿತಿಯ ಎಲ್ಲಾ ನಾಗರಿಕರಿಗೂ ಇನ್ನು ಮುಂದೆ 5 ಲಕ್ಷ ರೂ.ವರೆಗಿನ ಆರೋಗ್ಯ ವಿಮೆ ಸಿಗಲಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರೊಂದಿಗೆ ಕಳೆದ ಲೋಕಸಭಾ ಚುನಾವಣೆ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಪೂರೈಸಿದಂತೆ ಆಗಿದೆ. ಜೊತೆಗೆ 4.5 ಕೋಟಿ ಕುಟುಂಬಗಳ 5 ಕೋಟಿ ಹಿರಿಯನಾಗರಿಕರಿಗೆ ದೊಡ್ಡ ಆರ್ಥಿಕ ಹೊರೆಯನ್ನು ನಿವಾರಿಸುವ ಬಹುದೊಡ್ಡ ಕೊಡುಗೆಯನ್ನು ಸರ್ಕಾರ ನೀಡಿದಂತಾಗಿದೆ.
ಹಾಲಿ ಜಾರಿಯಲ್ಲಿದ್ದ ಆಯು ಪ್ಲಾನ್ ಭಾರತ್ ವಿಮಾ ಯೋಜನೆ 16-59ರ ವಯೋಮಿತಿವರೆಗೆ ಮಾತ್ರ (ಕೆಲವೆಡೆ ವಯೋಮಿತಿ ವಿನಾಯ್ತಿ ಇದೆ) ಸೀಮಿತವಾಗಿತ್ತು. ಬಡವರಿಗೆ ಮಾತ್ರ ಲಭ್ಯವಿತ್ತು. ಜೊತೆಗೆ ಇಡೀ ಕುಟುಂಬಕ್ಕೆ ಸೇರಿ ವಾರ್ಷಿಕ ಲಕ್ಷರು, ವಿಮೆ ನೀಡಲಾಗುತಿತ್ತು. ಆದರೆ ಇದೀಗ ಯೋಜನೆಯನ್ನು 10 ವರ್ಷದ ತುಂಬಿದ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲರಿಗೂ ವಿಸ್ತರಿಸಲಾಗಿದೆ. ಜೊತೆಗೆ ಇದಕ್ಕೆ ಫಲಾನುಭವಿಗಳಿಗೆ ಯಾವುದೇ ಆದಾಯ ಮಿತಿಯನ್ನು ನಿಗದಿಮಾಡಿಲ್ಲ. ಹೀಗಾಗಿ ದೇಶದ 4.5 ಕೋಟಿ ಕುಟುಂಬಗಳ6 ಕೋಟಿ ಜನರು ವಾರ್ಷಿ ಲಕ್ಷ ರು. ಆರೋಗ್ಯ ವಿಮೆ ಯೋಜನೆಯ ಲಾಭ ಪಡೆಯಬಹುದಾಗಿದೆ. ಈ ಯೋಜನೆ ಫಲಾನುಭವಿಗಳಿಗೆ ವಿಶೇಷ ಕಾರ್ಡ್ ನೀಡಲಾಗುವುದು. ಮೊದಲ ವರ್ಷ ಈ ಯೋಜನೆಗಾಗಿ 3437ಕೋಟಿ ರೂ. ವಿನಿಯೋಗಿಸಲಾಗುವುದು ಎಂದು ಸಂಪುಟ ಸಭೆಯ ಬಳಿಕ ಸಚಿವ ಅಶ್ವಿನ್ ವೈಷ್ಣವ್ ಮಾಹಿತಿ ನೀಡಿದರು.

Share News

About bigtvnews22

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *