ಹುಬ್ಬಳ್ಳಿ: ಗೃಹ ಸಚಿವರು ನಾಗಮಂಗಲದಲ್ಲಿ ನಡೆದ ಗಲಾಟೆ ಸಣ್ಣದ್ದು ಎಂಬ ಹೇಳಿಕೆ ಕೊಟ್ಟಿದ್ದಾರೆ. ಆದರೆ ಗೃಹ ಸಚಿವರು ರಾಷ್ಟ್ರದ್ರೋಹಿ ಮುಸ್ಲಿಂ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳತ್ತೇವೆ ಎಂಬ ಹೇಳಿಕೆ ಕೊಡಬೇಕಿತ್ತು. ಅದು ಬಿಟ್ಟು ಅಮಾಯಕ ಜನರನ್ನು ಭಯಬೀಳುವಂತೆ ಮಾಡಿದ್ದಾರೆ.
ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಘಟನೆ ಪೂರ್ವ ನಿಯೋಜಿತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ರಾಷ್ಟ್ರದ್ರೋಹಿ ಚಟುವಟಿಕೆಗಳು ನಾಗಮಂಗಲದಲ್ಲಿ ನಡೆದಿದೆ. ಹಿಂದೂಗಳು ಸಾಮೂಹಿಕವಾಗಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮಸೀದಿ ಮುಂದೆ ಡೋಳು ಬಾರಿಸಲಾಗಿದೆ ಎಂಬ ಕಾರಣಕ್ಕೆ ಶಾಂತಿಯುತವಾಗಿ ನಡೆಯುತ್ತಿದ್ದ ಮೆರವಣಿಗೆ ಮೇಲೆ ಗೂಂಡಾಗಿರಿ ನಡೆಸಲಾಗಿದೆ. ಪೆಟ್ರೋಲ್ ಬಾಂಬ್, ಕಲ್ಲು ತೂರಾಟ ಮಾಡಲಾಗಿದೆ. ಹಿಂದೂಗಳ ಮೇಲೆ ಆಕ್ರಮಣ ಮಾಡಲಾಗಿದೆ ಎಂದರು.
ಇತ್ತಿಚೆಗೆ ಕಾಂಗ್ರೆಸ್ ನಾಯಕ ಐವಾನ್ ಡಿಸೋಜಾ ಬಾಂಗ್ಲಾ ಮಾದರಿಯಲ್ಲಿ ರಾಜ್ಯದಲ್ಲಿ ಗಲಭೆ ನಡೆಯುತ್ತದೆ ಎಂಬ ಹೇಳಿಕೆಯನ್ನು ನೀಡಿದ್ದರು. ಅದರಂತೆ ಪಾಕಿಸ್ತಾನ ಮನಸ್ಥಿತಿಯ ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಕಿಡಿಕಾರಿದರು.
ಮಸೀದಿ ಇರುವಲ್ಲಿ ಗಣಪತಿ ಹೋಗಬಾರದು ಎಂಬ ನಿಯಮವಿಲ್ಲ. ಮೆರವಣಿಗೆ ಮಾಡಬೇಕಾದರೇ ಪೂರ್ವದಲ್ಲಿ ಅನುಮತಿ ಪಡೆಯಲಾಗಿರುತ್ತದೆ. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಇವರ ರಕ್ಷಣೆ ಮಾಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಹಿಂದಿನಿಂದಲೂ ಓಲೈಕೆ ರಾಜಕಾರಣ ಮಾಡುತ್ತಲೇ ಬರುತ್ತಿದೆ. ಅದು ಮುಂದುವರೆದಿದೆ ಅಷ್ಟೇ. ಯಾರು ಹಿಂದೂಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಅಂತಹ ಮುಸ್ಲಿಂ ಗೂಂಡಾಗಳನ್ನು ಬಂಧಿಸುವ ಕೆಲಸ ನಡೆಯಬೇಕೆಂದು ಈಶ್ವರಪ್ಪ ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

