Breaking News

ನಾಗಮಂಗಲದಲ್ಲಿ ಉದ್ವಿಗ್ನ ಸ್ಥಿತಿ: ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಯತ್ನಾಳ್ ಆಗ್ರಹ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ದುರದ್ದೇಶಪೂರ್ವಕವಾಗಿ ಕಲ್ಲುತೂರಾಟ ನಡೆಸಿದ್ದು, ಇದು ಪೂರ್ವ ನಿಯೋಜಿತಕೃತ್ಯವಾಗಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ತಾರ್ಕಿಕ ಅಂತ್ಯ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಫೈರ್ ಬ್ರ್ಯಾಂಡ್ ಬಿಜೆಪಿ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ನಾಗಮಂಗಲ ಪಟ್ಟಣದಲ್ಲಿ ನಡೆದ ಗಲಭೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಯತ್ನಾಳ್ ಅವರು, ನಿನ್ನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಗುರಿ ಮಾಡಿಕೊಂಡು ಮುಸ್ಲಿಂ ಯುವಕರು ಗಲಭೆ ನಡೆಸಿದ್ದಾರೆ. ಮಸೀದಿ ಮುಂದೆ ಲಾಂಗು ಹಿಡಿದ ದುಷ್ಕರ್ಮಿಗಳು ಮಸೀದಿ ಮುಂದೆ ಬೆಂಕಿ ಹಚ್ಚಿ ಮೆರವಣಿಗೆ ಹೋಗದಂತೆ ತಡೆದಿದ್ದಾರೆ. ಹಿಂದೂ ಆಚರಣೆಗೆ ಅಡ್ಡಿ ಪಡಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಗಲಭೆ ನಡೆಸಿದ ತಪ್ಪಿತಸ್ಥರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಿ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಬೇಕು. ಇನ್ನೂ ಈ ಕೂಡಲೇ ಕರ್ತವ್ಯಲೋಪವೆಸಗಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಪೊಲೀಸರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತ್ತು ಮಾಡಬೇಕು ಎಂದು ಅವರು ಆಗ್ರಹಿಸಿದರು.
ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದ ದುಷ್ಕರ್ಮಿಗಳಿಂದಲೇ ಹಾನಿಯಾದ ವೆಚ್ಚವನ್ನು ಪಡೆಯಬೇಕು. ರಾಜ್ಯ ಸರ್ಕಾರ ನೀಡಿರುವ ಎಲ್ಲ ಸವಲತ್ತುಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ವಾಪಸ್ ಪಡೆಯಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *