Breaking News

ಬ್ರಿಕ್ಸ್ ಭದ್ರತಾ ಸಲಹೆಗಾರರ ಸಮಾವೇಶ: ಅಜಿತ್ ದೋವಲ್ ಸೆರ್ಗೆಯ್ ಶೋಯಿಗು ಮಾತುಕತೆ

ರಷ್ಯಾ: ಬ್ರಿಕ್ಸ್ ರಾಷ್ಟ್ರಗಳ ಭದ್ರತಾ ಸಲಹೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ರಷ್ಯಾಕ್ಕೆ ಆಗಮಿಸಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ರಷ್ಯಾದ ಎನ್‌ಎಸ್‌ಎ ಸೆರ್ಗೆಯ್ ಶೋಯಿಗು ಅವರೊಂದಿಗೆ ಮಾತುಕತೆ ನಡೆಸಿದರು.
ಉಕ್ರೇನ್‌ನೊಂದಿಗಿನ ಎರಡೂವರೆ ವರ್ಷಗಳ ಯುದ್ಧವನ್ನು ಕೊನೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಶಾಂತಿ ಪ್ರಸ್ತಾವವನ್ನು ದೋವಲ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಹಂಚಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ದೋವಲ್ ಮತ್ತು ಶೋಯಿಗು ಪರಸ್ಪರ ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ ವಿಷಯ ಕುರಿತು ಚರ್ಚಿಸಿದರು, ಆಗಸ್ಟ್ 23 ರಂದು ಕೈವ್‌ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್‌ಕಿ ಅವರೊಂದಿಗೆ ಮೋದಿ ಅವರು ನಡೆಸಿದ ಮಾತುಕತೆ ಚರ್ಚೆಯಲ್ಲಿ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *