ಕಲಬುರಗಿ: ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇರುವ ಕೊಳೆಗೇರಿಗಳ ಅಭಿವೃದ್ಧಿ ಇನ್ನೂ ಮರೀಚಿಕೆಯಾಗಿದ್ದು, ಕೊಳೆಗೇರಿಗಳಲ್ಲಿನ 21,389 ಕುಟುಂಬಗಳ ಪೈಕಿ 2,799 ಕುಟುಂಬಗಳಿಗೆ ಮಾತ್ರ ಹಕ್ಕುಪತ್ರ ಭಾಗ್ಯ ಸಿಕ್ಕಿದೆ.
ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಲಬುರಗಿ ಉಪವಿಭಾಗ ಗುರುತಿಸಿರುವ ಬಹುತೇಕ ಕೊಳೆಗೇರಿಗಳು ಇಕ್ಕಟ್ಟಾದ ಪ್ರದೇಶದಲ್ಲಿವೆ, ಅಲ್ಲಿನ ನಿವಾಸಿಗಳಿಗೆ ಸಮರ್ಪಕವಾದ ಸೂರಿನ ವ್ಯವಸ್ಥೆ ಇಲ್ಲದೇ ಗುಡಿಸಲು, ಶೆಡ್‌ಗಳಲ್ಲಿ ವಾಸವಾಗಿದ್ದು, ಅವರ ಬದುಕು ಯಾತನಾಮಯವಾಗಿದೆ. ರಸ್ತೆ, ಕುಡಿಯುವ ನೀರು, ಸ್ವಚ್ಛತೆ ಸಮಸ್ಯೆಯ ಜತೆಗೆ ಆರೋಗ್ಯ ಸಮಸ್ಯೆಯೂ ಅನುಭವಿಸುತ್ತಿದ್ದಾರೆ.
ಜಿಲ್ಲೆಯ 11 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 128 ಪ್ರದೇಶಗಳನ್ನು ಕೊಳೆಗೇರಿ ಎಂದು ಘೋಷಿಸಲಾಗಿದೆ. ಸರ್ಕಾರದ ಆದೇಶದಂತೆ 21,389 ಕುಟುಂಬಗಳು ವಾಸ ಮಾಡುತ್ತಿವೆ. ಆರ್ಥಿಕವಾಗಿ ತೀರಾ ಹಿಂದುಳಿದವರೇ ಇಲ್ಲಿ ವಾಸವಾಗಿದ್ದಾರೆ ಈ ಕೊಳೆಗೇರಿಗಳಿಗೆ ಅಗತ್ಯ ಮೂಲಸೌಕರ್ಯಗಳು ಇಲ್ಲದೆ ಇಲ್ಲಿನ ನಿವಾಸಿಗಳ ಬದುಕು ಅಸಹನೀಯವಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

