ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣ ವಿರೋಧಿಸಿ ನಡೆದ ಪಾದಯಾತ್ರೆ ಬಳಿಕ ಇದೀಗ ಮತ್ತೊಂದು ಪಾದಯಾತ್ರೆಗೆ ಬಿಜೆಪಿ ಸಜ್ಜಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಆರ್ಥಿಕ ಅಕ್ರಮವ ವಿರುದ್ಧ ಪಾದಯಾತ್ರೆ ನಡೆಸಿ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ನಿರ್ಧರಿಸಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಈ ಕುರಿತು ಮಾಹಿತಿ ನೀಡಿದರು.
ಹೈಕಮಾಂಡ್ ನಮಗೆ ಸಲಹೆ ನೀಡಿದೆ, ನಾವೂ ಕೂಡ ವಾಲ್ಮೀಕಿ ಹಗರಣದ ವಿಚಾರದಲ್ಲಿ ಪಾದಯಾತ್ರೆ ಮಾಡುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಮ್ಮ 2ನೇ ಹಂತದ ಹೋರಾಟ ಶುರುವಾಗಲಿದೆ, ಅದು ಯತ್ನಾಳ್ ಪಾದಯಾತ್ರೆ ಎಂದಲ್ಲ ಬಿಜೆಪಿ ಪಾದಯಾತ್ರೆ, ಪಾದಯಾತ್ರೆ ದಿನಾಂಕ ಮತ್ತು ಸ್ವರೂಪದ ಬಗ್ಗೆ ಬಿಜೆಪಿ ನಾಯಕರೆಲ್ಲ ಕುಳಿತು ಚರ್ಚೆ ಮಾಡುತ್ತೇವೆ. ನಮ್ಮೆಲ್ಲ ಸ್ನೇಹಿತರೂ ಕೂಡ ವಾಲ್ಮೀಕಿ ಪಾದಯಾತ್ರೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ಸಿಗರು ದಲಿತ ವಿರೋಧಿಗಳು…ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಅಮೆರಿಕಾದಲ್ಲಿದ್ದು ಮೀಸಲಾತಿ ರದ್ದು ಮಾಡುವ ಹೇಳಿಕೆ ಕೊಟ್ಟಿದ್ದಾರೆ. ಅವರ ಹೇಳಿಕೆಯಿಂದ ದೇಶಾದ್ಯಂತ ವಿರೋಧ ಪಕ್ಷಗಳು, ದಲಿತ ಸಮುದಾಯಗಳು ಕುಪಿತಗೊಂಡಿವೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

