Breaking News

ಕೇಂದ್ರಕ್ಕೆ ಕಸ್ತೂರಿ ರಂಗನ್ ವರದಿ ಬಗ್ಗೆ ರಾಜ್ಯದ ಅಭಿಪ್ರಾಯ ಸಲ್ಲಿಕೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಸೆ. 27 ರೊಳಗೆ ಕೇಂದ್ರ ಸರ್ಕಾರಕ್ಕೆ ಕಸ್ತೂರಿ ರಂಗ್ ವರದಿ ಬಗ್ಗೆ ರಾಜ್ಯದ ಅಭಿಪ್ರಾಯ ಸಲ್ಲಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನ ಅರಣ್ಯ ಭವನದಲ್ಲಿ ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ಮಾತನಾಡಿದ ಅವರು, ಪಶ್ಚಿಮಘಟ್ಟ ಹಲವು ನದಿಗಳ ಮೂಲವಷ್ಟೇ ಅಲ್ಲದೆ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ನೆಲೆಯಾಗಿದೆ.
ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಇದೇ 19 ರಂದು ಪಶ್ಚಿಮಘಟ್ಟ ವ್ಯಾಪ್ತಿಯ ಬಾಧ್ಯಸ್ಥರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ, ನಂತರ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ ನಂತರ ಸಚಿವ ಸಂಪುಟದ ಅನುಮೋದನೆ ಪಡೆದು, ಪಶ್ವಿಮಘಟ್ಟದ ಜೀವವೈವಿಧ್ಯ, ಜನರ ಜೀವನೋಪಾಯ ಎರಡೂ ಇರುವ ರೀತಿಯಲ್ಲಿ ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯದ ನಿಲುವು ತಿಳಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
ಕಳೆದ 16 ತಿಂಗಳ ಅವಧಿಯಲ್ಲಿ ಅರಣ್ಯ ಇಲಾಖೆ ಸುಮಾರು 10 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಜೊತೆಗೆ ಬೆಂಗಳೂರು, ಕೋಲಾರ, ಬೀದರ್‌ ಸೇರಿದಂತೆ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ ಬೆಲೆ ಬಾಳುವ 2500 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆದಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *