Breaking News

ಅಗ್ನಿವೀರರಿಗೆ ಶೇ.10 ರಷ್ಟು ಮೀಸಲಾತಿ ಕಲ್ಪಿಸಿದ ಒಡಿಶಾ ಸರ್ಕಾರ

ಒಡಿಶಾ : ಒಡಿಶಾ ರಾಜ್ಯ ಸರ್ಕಾರವು ಇಂದು ಮಹತ್ವದ ನಿರ್ಣಯ ಕೈಗೊಂಡಿದ್ದು, ಸಚಿವ ಸಂಪುಟದಲ್ಲಿ ಮೂರು ಮಹತ್ವದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಗ್ನಿವೀರ್ ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಒಂದು ವರ್ಷದ ತರಬೇತಿ ಹಾಗೂ 4 ವರ್ಷಗಳ ಉದ್ಯೋಗದ ನಂತರ ಅಗ್ನಿವೀರರಿಗೆ ರಾಜ್ಯ ಸರ್ಕಾರಿ ಸೇವೆಯಲ್ಲಿ ಶೇ.10ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ.
ರಾಜ್ಯ ಸರ್ಕಾರದ ಪೊಲೀಸ್ ಇಲಾಖೆ, ಅಗ್ನಿಶಾಮಕ ಮತ್ತು ಅರಣ್ಯ ಇಲಾಖೆಗಳಲ್ಲಿ ಶೇ.10ರಷ್ಟು ಮೀಸಲಾತಿ ಕಲ್ಪಿಸಿದೆ. ದೈಹಿಕ ದಕ್ಷತೆಯ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದ್ದು, ರಾಜ್ಯದ ಏಕರೂಪದ ಸೇವೆಗಳಲ್ಲಿ ನೇರ ನೇಮಕಾತಿಯಲ್ಲೂ ಎಲ್ಲಾ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಲ್ಲಿ ಮಾಜಿ ಅಗ್ನಿವೀರರಿಗೆ 10% ಸಮತಲ ಮೀಸಲಾತಿ ನೀಡಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *