Breaking News

ರಾಜ್ಯದಲ್ಲಿ ಸೆ.13 ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿನ ಹವಾಮಾನ ವೈಪರೀತ್ಯಗಳ ಪ್ರಭಾವ ಮುಂದುವರಿದಿದ್ದು, ಹೀಗಾಗಿದ ದೇಶದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾಜಸ್ಥಾನ, ಗುಜರಾತ್‌, ತೆಲಂಗಾಣದಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಕರ್ನಾಟಕದಲ್ಲಿ ಸೆಪ್ಟಂಬರ್ 13ರ ವರೆಗೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿ, ಕೊಪ್ಪಳ, ಗದಗ, ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾಧಾರಣೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *