Breaking News

ಜಲವಿದ್ಯುತ್ ಸ್ಥಾವರದ ಆರ್‌ಟಿಪಿಎಸ್ ಹಾಗೂ ವೈಟಿಪಿಎಸ್ ಘಟಕಗಳು ತಾತ್ಕಲಿಕ ಬಂದ್

ಶಕ್ತಿನಗರ: ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದರಿಂದ ಜಲವಿದ್ಯುತ್‌ ಉತ್ಪಾದನೆ ಪ್ರಮಾಣ ಹೆಚ್ಚಿಸಿದ ಪರಿಣಾಮ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ಆರು ಘಟಕಗಳಲ್ಲಿ ಹಾಗೂ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ವೈಟಿಪಿಎಸ್) ಎರಡು ಘಟಕಗಳಲ್ಲಿ ತಾತ್ಕಲಿಕವಾಗಿ ವಿದ್ಯುತ್‌ ಉತ್ಪಾದನೆ ನಿಲ್ಲಿಸಲಾಗಿದೆ.
ಬಹುತೇಕ ಜಲಾಶಯಗಳು ಭರ್ತಿ ಹಂತಕ್ಕೆ ತಲುಪಿದ್ದರಿಂದ ಜಲವಿದ್ಯುತ್ ಕೇಂದ್ರಗಳು ಕಾರ್ಯಾರಂಭಿಸಿವೆ. ಶಾಖೋತ್ಪನ್ನ ಘಟಕಗಳ ಉತ್ಪಾದನೆ ತಾತ್ಕಲಿಕವಾಗಿ ಬಂದ್ ಮಾಡಲು ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ಮುಂದಾಗಿದೆ. ಮತ್ತೊಂದೆಡೆ ಪವನ ಮತ್ತು ಸೌರ ವಿದ್ಯುತ್ ಲಭ್ಯತೆಯೂ ಹೆಚ್ಚಾಗಿದ್ದರಿಂದ ಶಾಖೋತ್ಪನ್ನ ಘಟಕಗಳು ನಿರಾಳವಾಗಿವೆ ಸದ್ಯ ಆರ್‌ಟಿಪಿಎಸ್‌ನ ಎರಡು ಘಟಕಗಳಲ್ಲಿ ಮಾತ್ರ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ.
ವಾರ್ಷಿಕ ನಿರ್ವಹಣೆ ನಿಮಿತ್ತ 210 ಮೆಗಾವಾಟ್ ಸಾಮರ್ಥ್ಯದ 6ನೇ ಘಟಕದಲ್ಲಿ ಉತ್ಪಾದನೆ ಬಂದ್‌ ಮಾಡಲಾಗಿತ್ತು. ಇದೀಗ 1, 2, 3, 4 ಮತ್ತು 7ನೇ ಘಟಕಗಳಲ್ಲಿ ತಾತ್ಕಾಲಿಕವಾಗಿ ಉತ್ಪಾದನೆ ಬಂದ್ ಮಾಡಿದ್ದೇವೆ ಎಂದು ಆರ್‌ಟಿಪಿಎಸ್‌ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಪಿ.ನಾರಾಯಣ ಗಜಕೋಶ ತಿಳಿಸಿದರು.
ವಿದ್ಯುತ್ ಬೇಡಿಕೆ ಇಲ್ಲದ ಪರಿಣಾಮ ವೈಟಿಪಿಎಸ್‌ನ ತಲಾ 800 ಮೆಗಾವಾಟ್ ಸಾಮರ್ಥ್ಯದ ಎರಡು ವಿದ್ಯುತ್ ಘಟಕಗಳ ವಿದ್ಯುತ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವೈಟಿಪಿಎಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಗಂಗಾಧರ ಹೇಳಿದರು.
ಕಲ್ಲಿದ್ದಲು ವಿಭಾಗದಲ್ಲಿ 2.55 ಲಕ್ಷ ಮೆಟ್ರಿಕ್ ಟನ್‌ ಕಲ್ಲಿದ್ದಲು ಸಂಗ್ರಹ ಇದೆ. ವಿದ್ಯುತ್ ಬೇಡಿಕೆ ಇಲ್ಲದ ಪರಿಣಾಮ ವಿವಿಧ ಕಲ್ಲಿದ್ದಲು ಗಣಿಗಳಿಂದ 3 ದಿನಕ್ಕೊಮ್ಮೆ ಮಾತ್ರ ಒಂದು ಕಲ್ಲಿದ್ದಲು ರೇಕ್ ಬರುತ್ತಿದೆ. ವಿದ್ಯುತ್ ಘಟಕಗಳ ಉತ್ಪಾದನೆ ಆರಂಭವಿದ್ದಾಗ ದಿನಕ್ಕೆ 4 ಕಲ್ಲಿದ್ದಲು ರೇಕ್‌ಗಳು ಬರುತ್ತಿದ್ದವು ಎಂದು ಅವರು ತಿಳಿಸಿದರು. ಘಟಕಗಳ ನಿರ್ವಹಣೆಗೆ ಸಾಕಷ್ಟು ಕಾಲಾವಕಾಶ ಸಿಕ್ಕಂತಾಗಿದೆ, ಬೇಸಿಗೆಯಲ್ಲಿ ಕಂಡು ಬಂದಿದ್ದ ತಾಂತ್ರಿಕ ತೊಡಕುಗಳನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿತ್ತು. ಈಗ ಶಾಶ್ವತ ಪರಿಹಾರ ದೊರಕಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *