Breaking News

ಕುಡಿಯುವ ನೀರಿನ ಯೋಜನೆ ಘಟಕಕ್ಕೆ ಭೇಟಿ ನೀಡಿದ ಜಿ.ಪಂ. ಸಿಇಒ

ಹೊಸಪೇಟೆ: ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಶಾ ಅವರು ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ಹತ್ತಿರದ ಪಾವಗಡ ಕುಡಿಯುವ ನೀರಿನ ಯೋಜನೆ ಘಟಕಕ್ಕೆ ಭೇಟಿ ನೀಡಿದ್ದಾರೆ.
ನೀರಿನ ಶುದ್ಧೀಕರಣ ಘಟಕಗಳಲ್ಲಿ ಕ್ಯಾಸ್ಕೇಡ್ ಏರೇಟರ್, ಸ್ಟಿಲ್ಲಿಂಗ್ ಬೇಸಿನ್, ಫ್ಲಾಶ್ ಮಿಕ್ಸರ್ಸ್, ಕೆಮಿಕಲ್ ಹೌಸ್, ಕ್ಲೋರೀನ್ ಹೌಸ್, ಫಿಲ್ಟರ್ ಹೌಸ್ ಸೇರಿದಂತೆ ವಿವಿಧ ಉಪ ಘಟಕಗಳನ್ನು ಖುದ್ದಾಗಿ ವೀಕ್ಷಿಸಿ ತಾಂತ್ರಿಕ ಸಿಬ್ಬಂದಿಯಿಂದ ಮಾಹಿತಿ ಪಡೆದರು.
ಘಟಕಗಳ ವೀಕ್ಷಣೆಯ ನಂತರ ಘಟಕದ ತಾಂತ್ರಿಕ ಸಿಬ್ಬಂದಿಯೊಂದಿಗೆ ಪ್ರತ್ಯೇಕ ಸಭೆ ನಡೆಸಿದರು. ಇದೆ ವೇಳೆ ಸಿಇಓ ಅವರು ಮಾತನಾಡಿ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ 215, ಹೊಸಪೇಟೆ ತಾಲೂಕಿನ 15 ಹಾಗೂ ಚಿತ್ರದುರ್ಗ ಜಿಲ್ಲೆಯ 908 ಸೇರಿ ಒಟ್ಟು 1138 ಜನವಸತಿ ಪ್ರದೇಶಗಳಿಗೆ ನೀರು ಶುದ್ಧೀಕರಿಸಿ ಪೂರೈಸುವ ಯೋಜನೆ ಇದಾಗಿದೆ. ಅಧಿಕಾರಿಗಳು ಘಟಕದ ಮಹತ್ವ ಅರಿತು ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *