Breaking News

ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ಸನ್ಮಾನ ಕಾರ್ಯಕ್ರಮ

ನವಲಗುಂದ: ಮಕ್ಕಳ ಕಲಿಕೆಯನ್ನು ಪ್ರೋತ್ಸಾಹಿಸಿ ವಿದ್ಯಾರ್ಥಿಗಳ ಕನಸನ್ನು ಸಾಕಾರಗೊಳಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಮಾಡಲ್ ಹೈಸ್ಕೂಲ ಮುಖ್ಯೋಪಾಧ್ಯಾಯ ಎಸ್ ವಾಯ್ ಉಳ್ಳಿಕಾಶಿ ಹೇಳಿದರು.

ಅವರು ಮಾಡೆಲ್ ಬಾಲಕಿಯರ ಪ್ರೌಢಶಾಲೆಯಲ್ಲಿ ಗಣೇಶ ಪ್ರತಿಷ್ಠಾಪನಾ ಕಾರ್ಯಕ್ರಮ ಅಂಗವಾಗಿ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದುದು. ಸಮಾಜದಿಂದ ಏನನ್ನು ಬಯಸದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ವರ್ಗವನ್ನು ಸನ್ಮಾನಿಸುವ ಪ್ರೋತ್ಸಾಹಿಸುವಂತಹ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೆ ವೇಳೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಾದ ಎ ಆರ್ ಹೌದಕ್ಕನ್ನವರ ಹಾಗೂ ಎಸ್ ಎನ್ ಬೀರನೂರರನ್ನು ಸನ್ಮಾನಿಸಲಾಯಿತು.

ಶಿಕ್ಷಕರಾದ ಯು ಎ ಗದಗ, ಆರ್ ಎಸ್ ಆಲೂರ, ಎಸ್ ಜಿ ಪಾಟೀಲ್‌, ಪಿ ಬಿ ಚಳಕೊಪ್ಪ, ಎಮ್ ಬಿ ಸುಳ್ಳದ ಸೇರಿದಂತೆ ಶಿಕ್ಷಕ-ಶಿಕ್ಷಕಿಯರು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಕಾರ್ಯದರ್ಶಿಗಳು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *