Breaking News

ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಮನಗರ: ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಲಾಗಿತ್ತು, ಆದರೆ ಈಗ ಮತ್ತೆ ನಂದಿನಿ ದರವನ್ನು ಹೆಚ್ಚಳ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮಾಗಡಿ ಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಅವರು ಮಾತನಾಡಿ, ಕರ್ನಾಟಕದಲ್ಲಿ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ದರ ನೇರವಾಗಿ ರೈತರಿಗೆ ಹೋಗಬೇಕು, ನಂದಿನ ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಸಭೆ ಕರೆದು, ಚರ್ಚೆ ಮಾಡಿ ದರ ಹೆಚ್ಚಳ ಮಾಡೋಣಾ ಎಂದಿದ್ದಾರೆ.
ಇದೇ ವೇಳೆ ಜೆಡಿಎಸ್ ಬಗ್ಗೆ ಹರಿಹಾಯ್ದಿರುವ ಸಿಎಂ ಸಿದ್ದರಾಮಯ್ಯ ಅವರು, ನೀವೆಲ್ಲಾ ರೈತರ ಮಕ್ಕಳಿದ್ದೀರ ಮೂರು ರೂಪಾಯಿ ಹೆಚ್ಚಳ ಮಾಡಿದರೆ ಅಥವಾ ಏನೇ ಹೆಚ್ಚು ಮಾಡಿದರೂ ಲಬ್ಬೋ ಲಬ್ಬೋ ಅಂತ ಹೇಳುತ್ತಾರೆ. ನಾವೂ ರೈತರ ಮಕ್ಕಳು ರೈತರ ಮಕ್ಕಳು ಅಂತ ಹೇಳುತ್ತಾರೆ. ಆದರೆ ರೈತರ ಮಕ್ಕಳಿಗೆ ನೀವೇನಾದ್ರೂ ಕೊಟ್ಟಿದ್ದೀರಾ, ಏನೂ ಮಾಡದೆ ನಾವೂ ರೈತರ ಮಕ್ಕಳು ಅಂತ ಹೇಳುತ್ತಾರೆ ಎಂದು ಕುಮಾರಸ್ವಾಮಿಯವರಿಗೆ ವಾಗ್ದಾಳಿ ನಡೆಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *