Breaking News

ರಾಜ್ಯದಲ್ಲಿ ಸೋಲಾರ್ ಬೀದಿದೀಪ ಅಳವಡಿಸುವ ಹೊಂಬೆಳಕು ಯೋಜನೆ ಜಾರಿಗೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ಹೊಂಬೆಳಕು ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
ಈ ವರ್ಷದ ಆಯವ್ಯಯದಲ್ಲಿ ಘೋಷಿಸಿದ್ದಂತೆ ಹೊಂಬೆಳಕು ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದ್ದು, ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 25 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದೆಂದು ಸಚಿವರು ಹೇಳಿದ್ದು, ಸೌರ ಬೀದಿ ದೀಪಗಳು ಪರಿಸರ ಸ್ನೇಹಿಯಾಗಿದ್ದು, ಇಂಧನ ಬಳಕೆಯಾಗದಿರುವುದರಿಂದ ಗ್ರಾಮ ಪಂಚಾಯತಿಗಳಿಗೆ ವಿದ್ಯುತ್‌ ವೆಚ್ಚದ ಹೊರೆ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ.
ಅಳವಡಿಸಲಾಗುತ್ತಿರುವ ಸೌರ ಬೀದಿ ದೀಪಗಳು ಎಲ್.ಇ.ಡಿ ತಂತ್ರಜ್ಞಾನವನ್ನು ಹೊಂದಿದ್ದು ದೀರ್ಘ ಕಾಲ ಬಾಳಿಕೆ ಬರಬಹುದೆಂದು ನಿರೀಕ್ಷಿಸಲಾಗಿದೆ, ಈ ವರ್ಷ ಸುಮಾರು 16,500 ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ಗುರಿ ಹೊಂದಲಾಗಿದೆ, ಗ್ರಾಮೀಣ ಜನರು ಪ್ರಖರ ಬೆಳಕನ್ನು ಪಡೆಯುವುದರೊಂದಿಗೆ ವಿದ್ಯುತ್‌ ವೆಚ್ಚದ ಮಿತವ್ಯಯದಿಂದ ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *