Breaking News

ಈರುಳ್ಳಿ ಮೇಲಿನ ಕನಿಷ್ಠ ರಫ್ತು ಬೆಲೆ ರದ್ದುಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅಂತರರಾಷ್ಟ್ರೀಯ ಕೊರತೆಯ ಲಾಭವನ್ನ ಭಾರತೀಯ ರೈತರಿಗೆ ವರ್ಗಾಯಿಸಲು ಈರುಳ್ಳಿ ರಫ್ತಿಗೆ ಈ ಹಿಂದೆ ನಿಗದಿಪಡಿಸಿದ್ದ ಕನಿಷ್ಠ ಬೆಲೆ ಮಿತಿಯನ್ನ ಸರ್ಕಾರ ಶುಕ್ರವಾರ ರದ್ದುಗೊಳಿಸಿದೆ.
ಸರ್ಕಾರವು ಈ ಹಿಂದೆ ಪ್ರತಿ ಟನ್ ಗೆ 550 ಡಾಲರ್ ಕನಿಷ್ಠ ರಫ್ತು ಬೆಲೆ ನಿಗದಿಪಡಿಸಿತ್ತು, ಇದರರ್ಥ ರೈತರು ತಮ್ಮ ಉತ್ಪನ್ನಗಳನ್ನು ಈ ದರಕ್ಕಿಂತ ಕಡಿಮೆ ಬೆಲೆಗೆ ವಿದೇಶದಲ್ಲಿ ಮಾರಾಟ ಮಾಡಲು ಸಾಧ್ಯವಿಲ್ಲ.
ಶುಕ್ರವಾರ ಹೊರಡಿಸಿದ ಡಿಜಿಎಫ್ಟಿ ಅಧಿಸೂಚನೆಯು ಎಂಇಪಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕಿದೆ. ಈರುಳ್ಳಿ ಉತ್ಪಾದಿಸುವ ಪ್ರಮುಖ ರಾಜ್ಯವಾದ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಕ್ರಮವು ಸರಕುಗಳ ರಫ್ತನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಈರುಳ್ಳಿ ರಫ್ತಿನ ಮೇಲಿನ ಕನಿಷ್ಠ ರಫ್ತು ಬೆಲೆ ಷರತ್ತು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ತೆಗೆದುಹಾಕಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *