Breaking News

ವಿವಿಧ ಬೇಡಿಕೆ ಈಡೇರಿಸುವಂತೆ ಕೇಂದ್ರ ಸಚಿವ ವಿ.ಸೋಮಣ್ಣಗೆ ರೈತರ ಹಕ್ಕು ಒತ್ತಾಯ ಪತ್ರ ಸಲ್ಲಿಕೆ

ಮೈಸೂರು: ಅಕ್ರಮ ಸಕ್ರಮ ಯೋಜನೆ ಮರು ಜಾರಿ ಆಗಬೇಕು, ಕೇಂದ್ರ ಸರ್ಕಾರ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ರೈತರು ಹಕ್ಕು ಒತ್ತಾಯ ಪತ್ರ ಸಲ್ಲಿಕೆ ಮಾಡಿದ್ದಾರೆ.
ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಮೈಸೂರಿಗೆ ಭೇಟಿ ನೀಡಿದ್ದು, ಈ ವೇಳೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ರೈತರ ಹಕ್ಕು ಒತ್ತಾಯ ಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸಚಿವರ ಬಳಿ ಮನವಿ ಮಾಡಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *