Breaking News

ವಿಮಾನ ನಿಲ್ದಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲು ಸಚಿವರೊಂದಿಗೆ ಚರ್ಚೆ

ರಾಯಚೂರು: ವಿಮಾನ ನಿಲ್ದಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸುವಂತೆ ಕೇಂದ್ರ ವಿಮಾನಯಾನ ಸಚಿವರೊಂದಿಗೆ ರಾಯಚೂರು ಲೋಕಸಭಾ ಸದಸ್ಯರಾದ ಜಿ ಕುಮಾರ್ ನಾಯಕ್ ಹಾಗೂ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಸುಧೀರ್ಘವಾಗಿ ಚರ್ಚಿಸಿದರು.
ನವದೆಹಲಿಯಲ್ಲಿ ವಿಮಾನಯಾನ ಸಚಿವರನ್ನು ಭೇಟಿಯಾಗಿ ರಾಯಚೂರು ವಿಮಾನ ನಿಲ್ದಾಣದ ಕುರಿತು ಮಾತನಾಡಿ,ರಾಯಚೂರಿನಲ್ಲಿ ವಿಮಾನ ನಿಲ್ದಾಣ ತ್ವರಿತಗತಿಯಲ್ಲಿ ಕಾಮಗಾರಿ ಪ್ರಾರಂಬಿಸುವ ಕುರಿತು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಅನುಮತಿ ನೀಡಲು ಅಗತ್ಯ ಕ್ರಮ ಕೈಗೊಂಡು ವಿಮಾನ ನಿಲ್ದಾಣಕ್ಕೆ ಯಾವುದೇ ಅಡಚಣೆ ಬಾರದಂತೆ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಪ್ರಾರಂಭಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಸಚಿವರಿಗೆ ತಿಳಿಸಿದರು.
ಈಗಾಗಲೇ ವಿಮಾನ ನಿಲ್ದಾಣ ಸ್ಥಳದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು. ತ್ವರಿತಗತಿಯಲ್ಲಿ ಕಾಮಗಾರಿ ಮುನ್ನಡೆಸಲು ಅಗತ್ಯ ಕ್ರಮ ಕೈಗೊಂಡು ಕಾಮಗಾರಿ ಮುಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ತಿಳಿಸಿದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *