Breaking News

ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ

ಹೊಸಪೇಟೆ: ಸೆ.17ರಂದು ನಡೆಯುವ ಕಲ್ಯಾಣ ಕರ್ನಾಟಕ ಉತ್ಸವವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲಾ ಅಧಿಕಾರಿಗಳು ಶ್ರಮಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಇ.ಬಾಲಕೃಷ್ಣಪ್ಪ ಅವರು ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ತಮ್ಮ ಕಚೇರಿಯ ಸಭಾಂಗಣದಲ್ಲಿ ನಡೆದ ಗೂಗಲ್ ಮೀಟ್ ಮೂಲಕ ಅಧಿಕಾರಿಗಳೊಂದಿಗೆ ಸಭೆಯ ಸಭೆ ನಡೆಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವವು ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯ ಪಾಲ್ಗೊಳ್ಳಬೇಕು. ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಶಿಷ್ಟಾಚಾರದಂತೆ ಗಣ್ಯರಿಗೆ ವಿರಣೆಗೆ ಕ್ರಮ ವಹಿಸಿ. ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ತ ಜಿಲ್ಲಾ ಕ್ರೀಡಾಂಗಣ, ಜಿಲ್ಲಾಡಳಿತ ಭವನ ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿ ಸ್ವಚ್ಛತೆ ಮತ್ತು ವಿದ್ಯುತ್ ದೀಪಾಲಂಕಾರ ಮಾಡಲು ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಅತಿಥಿಗಳು ಮತ್ತು ಗಣ್ಯ ವ್ಯಕ್ತಿಗಳು ಮತ್ತು ಪತ್ರಕರ್ತರಿಗೆ ಕೂಡಲು ಸರಿಯಾದ ಆಸನದ ವ್ಯವಸ್ಥೆ ಮಾಡಬೇಕು. ಪಂಥ ಸಂಚಲನದಲ್ಲಿ ಪಾಲ್ಗೊಳ್ಳುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಅಲ್ಪೋಪಹಾರ ವ್ಯವಸ್ಥೆಯನ್ನು ಮಾಡಬೇಕು. ಒಟ್ಟಾರೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *