ಜಮ್ಮು ಮತ್ತು ಕಾಶ್ಮೀರ: ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಗಿತ್ತು ಎಂದು ವರದಿಯಾಗಿದೆ.
ನ್ಯೂಸ್ 18ಗೆ ಲಭ್ಯವಾದ ಡ್ರೋನ್ ದೃಶ್ಯಾವಳಿಗಳು ಬಾರಾಮುಲ್ಲಾದ ಎನ್‌ಕೌಂಟರ್ ಸ್ಥಳದ ಬಳಿ ಗಾಯಗೊಂಡ ಭಯೋತ್ಪಾದಕ ಅಡಗಿರುವುದನ್ನು ತೋರಿಸುತ್ತದೆ. ಬಾರಾಮುಲ್ಲಾದ ಚಕ್ ಟಪ್ಪರ್ ಕ್ರೀರಿ ಪಟ್ಟನ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ನಿರತವಾಗಿದ್ದು, ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





