Breaking News

ಅ.3 ರಂದು ಪಿ ಎಸ್ ಐ ಪರೀಕ್ಷೆ

ಬೆಂಗಳೂರು: ಸೆಪ್ಟೆಂಬರ್‌ 22ರಂದು ನಡೆಸಲು ನಿಗದಿಯಾಗಿದ್ದ 402 ಪಿಎಸ್‌ಐ ಹುದ್ದೆಗಳ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ ಕೇಳಿ ಬಂದಿತ್ತು. ಕೆಇಎ ಅವರೊಂದಿಗೆ ಚರ್ಚಿಸಿ, ಸೆ.28ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆ ದಿನ ಯುಪಿಎಸ್‌ಸಿ ಇಂಗ್ಲೀಷ್ ಕಡ್ಡಾಯ ಪರೀಕ್ಷೆ ಇರುವುದರಿಂದ ಅಕ್ಟೋಬರ್ 3ರಂದು ನಡೆಸಲು ನಿರ್ಧರಿಸಲಾಗಿದೆ.
ಕೆಇಎ ಅವರು ಅಧಿಕೃತವಾಗಿ ಪ್ರಕಟಣೆ ಮಾಡಲಿದ್ದಾರೆ ಎಂದು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ತಿಳಿಸಿದರು.
ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಇಲಾಖಾವಾರು ಪರಿಶೀಲನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು. ಇದು ಮೊದಲ ಸಭೆಯಾಗಿರುವುದರಿಂದ ತೀರ್ಮಾನಕ್ಕೆ ಬಂದಿಲ್ಲ. ಎಲ್ಲ ಪ್ರಕರಣಗಳನ್ನು ಪರಿಶೀಲಿಸಿದ್ದೇವೆ. ಹೊಸದಾಗಿ ತನಿಖೆ ಆಗಬೇಕಿರುವುದನ್ನು ಗಮನಿಸಿದ್ದೇವೆ ಎರಡು ತಿಂಗಳೊಳಗೆ ಪೂರ್ಣಗೊಳಿಸಿ ಸಚಿವ ಸಂಪುಟಕ್ಕೆ ವರದಿ ಸಲ್ಲಿಸುತ್ತೇವೆ ಎಂದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *