Breaking News

ಜಮ್ಮುಕಾಶ್ಮೀರದಲ್ಲಿ ಮತ್ತೆ ಆರ್ಟಿಕಲ್ 370 ಸ್ಥಾಪನೆ: ಫಾರೂಕ್ ಅಬ್ದುಲ್ಲಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದೆ, ಎಲ್ಲಾ ಪಕ್ಷಗಳು ಈಗಾಗಲೇ ಚುನಾವಣಾ ಅಖಾಡಕ್ಕೆ ಧುಮುಕಿದ್ದು ವಿವಿಧ ಭರವಸೆಗಳನ್ನು ಮತದಾರರಿಗೆ ನೀಡುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೂಡ ಇದೀಗ ರಾಜ್ಯದ ಜನತೆಗೆ ಮತ್ತೊಂದು ಭರವಸೆ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಮತ್ತೆ ಆರ್ಟಿಕಲ್ 370 ಸ್ಥಾಪಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರದ ಹೃದಯ ಬಡಿತ ಎಂದು ಕರೆದಿರುವ ಅವರು, ರಾಜ್ಯಕ್ಕಿರುವ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳಲು ಬಿಜೆಪಿ ದಶಕಗಳ ಕಾಲ ತೆಗೆದುಕೊಂಡರೆ ಅದನ್ನು ಮರಳಿ ತರಲು ತಮ್ಮ ಪಕ್ಷವು ನಿರ್ಧಾರ ಮಾಡುತ್ತದೆ ಎಂದು ಬಿಜೆಪಿಗೆ ತಿರುಗೇಟು ಕೊಟ್ಟಿದ್ದಾರೆ.
370ನೇ ವಿಧಿಯನ್ನು ರದ್ದು ಮಾಡಲು ಬಿಜೆಪಿ 31 ವರ್ಷಗಳ ಕಾಲ ತೆಗೆದುಕೊಂಡರೆ, ನಾವು ಅದನ್ನು ಮರಳಿ ತರಲು ಸಿದ್ಧರಿದ್ದೇವೆ. ಆರ್ಟಿಕಲ್ 370 ಮತ್ತು 35 ಎ ಕಣಿವೆ ರಾಜ್ಯದ ಜನರ ಹೃದಯ ಬಡಿತವಾಗಿದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *