Breaking News

ಮೈಸೂರು ಕುಶಾಲನಗರ ರೈಲು ಮಾರ್ಗ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ

ಮೈಸೂರು: ಹೆಜ್ಜಾಲ-ಚಾಮರಾಜನಗರ, ಮೈಸೂರು-ಕುಶಾಲನಗರ ರೈಲು ಮಾರ್ಗ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದು ಸೇರಿದಂತೆ ಮೈಸೂರು ಭಾಗದಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು. ಮೈಸೂರು ಕೇಂದ್ರ ರೈಲು ನಿಲ್ದಾಣದಲ್ಲಿ ಬೆಂಗಳೂರಿನಂತೆಯೇ ಹಲವು ಸೌಲಭ್ಯಗಳು ದೊರೆಯುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.
ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಇಲ್ಲಿನ ಡಿಆರ್‌ಎಂ ಕಚೇರಿಯಲ್ಲಿ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ತಮಿಳುನಾಡಿನ ಸತ್ಯಮಂಗಲ ಕಾಡಿನಲ್ಲಿ ರೈಲು ಮಾರ್ಗ ಹಾದು ಹೋಗುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಈಗ ಅದನ್ನು ಬಿಟ್ಟು 142 ಕಿ.ಮೀ. ಉದ್ದದ ಹೊಸ ಯೋಜನೆಗೆ ಅಂದರೆ ಹೆಜ್ಜಾಲದಿಂದ-ಸಂತೇಮರಹಳ್ಳಿ ಮೂಲಕ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ನಿರ್ಮಿಸಲಾಗುವುದು. ₹1,380 ಕೋಟಿ ಮೊತ್ತದ ಯೋಜನೆ ಇದಾಗಿದೆ ಎಂದು ತಿಳಿಸಿದರು.
ಮೈಸೂರು- ಕುಶಾಲನಗರ ರೈಲು ಮಾರ್ಗ ನಿರ್ಮಾಣಕ್ಕೆ (89 ಕಿ.ಮೀ.) ₹3,084 ಕೋಟಿ ಖರ್ಚಾಗಲಿದೆ. ಇದಕ್ಕೆ ಸರ್ಕಾರದಿಂದ ಅನುಮೋದನೆ ‌ಕೊಡಿಸಿಕೊಡಲಾಗುವುದು. ಇದಕ್ಕಾಗಿ ಚಾಲನೆ ನೀಡಲಾಗಿದೆ. ಅಗತ್ಯವಿರುವ ಜಾಗವನ್ನು ರಾಜ್ಯ ಸರ್ಕಾರದಿಂದ ಕೊಡಿಸಿಕೊಡಬೇಕು ಎಂದು ಸಭೆಯಲ್ಲಿದ್ದ ಶಾಸಕ ತನ್ವೀರ್‌ ಸೇಠ್ ಅವರನ್ನು ಕೋರಿದರು.
ಅಮೃತ ಭಾರತ ಯೋಜನೆಯಡಿ ₹330 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ 15 ನಿಲ್ದಾಣಗಳನ್ನು 2025ರೊಳಗೆ ಅಭಿವೃದ್ಧಿಪಡಿಸಲಾಗುವುದು. ಅಶೋಕಪುರಂನಲ್ಲಿರುವ ರೈಲ್ವೆ ಕಾರ್ಯಾಗಾರವನ್ನು ಮೇಲ್ದರ್ಜೆಗೇರಿಸಲು ₹59.40 ಕೋಟಿ ಬಿಡುಗಡೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆಗಬೇಕಿರುವ ಕೆಲಸಗಳೇನು ಎಂಬ ಪ್ರಸ್ತಾವವನ್ನು ಮೂರು ದಿನಗಳಲ್ಲಿ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *