Breaking News

ಸೆ. 21 ರಿಂದ ರೈತರ ಜಾತ್ರೆ ಪ್ರಾರಂಭ

ಧಾರವಾಡ: ಪ್ರಸಕ್ತ ವರ್ಷ ಕೂಡ ಈ ರೈತರ ಜಾತ್ರೆ ಸೆಪ್ಟೆಂಬರ್ 21 ರಿಂದ ಆರಂಭಗೊಳ್ಳಲಿದೆ. ಸೆ.21 ರಂದು ಬೀಜ ಮೇಳ ಆರಂಭವಾದರೆ ಸೆ.22ಕ್ಕೆ ಕೃಷಿ ಮೇಳಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಈ ಕೃಷಿ ಮೇಳದ ಉದ್ಘಾಟನೆಗೆ ಆಗಮಿಸಲಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್‌.ಪಾಟೀಲ ಹೇಳಿದರು.

ಪ್ರಸಕ್ತ ವರ್ಷ ಈ ಕೃಷಿ ಮೇಳವನ್ನು ಹವಾಮಾನ ವೈಪರಿತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಶೀರ್ಷಿಕೆಯಡಿ ನಡೆಸಲಾಗುತ್ತಿದೆ. ಕೃಷಿ ಮೇಳದಲ್ಲಿ ಸಾವಿರಾರು ಸ್ಟಾಲ್‌ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಶ್ರೇಷ್ಠ ಕೃಷಿಕ, ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ಕೂಡ ನೀಡಲಾಗುವುದು.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *