Breaking News

ಬಸ್ ನಿಲುಗಡೆಗಾಗಿ ಪ್ರತಿಭಟನೆ

ನವಲಗುಂದ : ತಾಲೂಕಿನ ಕಾಲವಾಡ ಗ್ರಾಮದ ಕ್ರಾಸ್‌ನಲ್ಲಿ ಬಸ್‌ ನಿಲುಗಡೆಗಾಗಿ ಆಗ್ರಹಿಸಿ ಕಾಲವಾಡ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಟ್ರ್ಯಾಕ್ಟರ್‌ಗಳಲ್ಲಿ ನವಲಗುಂದಕ್ಕೆ ಬಂದು ತಹಶೀಲ್ದಾರ್ ಕಾರ್ಯಾಲಯದ ಎದುರಿಗೆ ಕೆಲ ಕಾಲ ಪ್ರತಿಭಟನೆ ನಡೆಸಿದರು.

ತಾಲೂಕು ಕೇಂದ್ರದಿಂದ 12ಕಿ. ಮೀ ದೂರದಲ್ಲಿರುವ ಕಾಲವಾಡ ಗ್ರಾಮದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆ, ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಗ್ರಾಮದಿಂದ 2 ಕಿ.ಮೀ ದೂರದಲ್ಲಿರುವ ಕಾಲವಾಡ ಕ್ರಾಸ್‌ನಲ್ಲಿ ಬಸ್‌ ನಿಲುಗಡೆ ಮಾಡದಿರುವುದರಿಂದ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಈ ಮೊದಲು ನವಲಗುಂದ ಸಾರಿಗೆ ಡಿಪೊ ವ್ಯವಸ್ಥಾಪಕರಿಗೆ ಮನವಿ ಮಾಡಿದರೂ ಕ್ರಮ ಜರುಗದ ಕಾರಣ ಪ್ರತಿಭಟನೆಗಿಳಿಯಲಾಗಿದೆ. ಸರಿಯಾದ ವೇಳೆಗೆ ಬಸ್‌ ವ್ಯವಸ್ಥೆ ಕಲ್ಪಿಸದಿದ್ದರೆ ಮುಂದೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *